ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಜಿಲ್ಲಾ ಪ್ರವಾಸ
ವಿಜಯಪುರ, 31 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ ಅವರು ಜನವರಿ 2 ರಿಂದ 5ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜನವರಿ 1 ರಂದು ಸಂಜೆ 6:35ಕ್ಕೆ ಬೆಂಗಳೂರಿನಿಂದ ರೈಲಿನ ಮೂಲಕ ಹೊರಟು, ಜ.2ರ ಬೆಳಿ
ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಜಿಲ್ಲಾ ಪ್ರವಾಸ


ವಿಜಯಪುರ, 31 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ ಅವರು ಜನವರಿ 2 ರಿಂದ 5ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಜನವರಿ 1 ರಂದು ಸಂಜೆ 6:35ಕ್ಕೆ ಬೆಂಗಳೂರಿನಿಂದ ರೈಲಿನ ಮೂಲಕ ಹೊರಟು, ಜ.2ರ ಬೆಳಿಗ್ಗೆ ವಿಜಯಪುರಕ್ಕೆ ಆಗಮಿಸುವ ಅವರು, ಬೆಳಿಗ್ಗೆ 11 ಗಂಟೆಯಿಂದ ಸರ್ಕಾರಿ ಕಚೇರಿಗಳ ಪರಿಶೀಲನೆ ನಡೆಸುವರು.

ಅಂದು ಮಧ್ಯಾಹ್ನ‌ 3 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಸರ್ಕಾರಿ ಕಚೇರಿ ಪರಿಶೀಲನೆ ನಡೆಸಲಿದ್ದಾರೆ. ಜ.3 ಹಾಗೂ 4ರಂದು ಪರಿಶೀಲನೆ ನಡೆಸುವರು.

ಜ.5ರ ಬೆಳಿಗ್ಗೆ 7:30ಕ್ಕೆ ಜೇವರ್ಗಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande