
ಬಳ್ಳಾರಿ, 31 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಹುಲಿಗಿಯ ಹುಲಿಗೆಮ್ಮ ದೇವಸ್ಥಾನದಲ್ಲಿ ನವಜಾತ ಹೆಣ್ಣು ಶಿಶುವೊಂದು ರಾತ್ರಿ ವೇಳೆಯಲ್ಲಿ ಪತ್ತೆಯಾಗಿದ್ದು ಜಿಲ್ಲಾಡಳಿತ ಆಸ್ಪತ್ರೆಗೆ ದಾಖಲಿಸಿದ್ದು, ಮಗು ಆರೋಗ್ಯವಾಗಿದ್ದು, ಪೊಲೀಸರು ತಾಯಿಗಾಗಿ ಹುಡುಕಾಟ ನಡೆಸಿದ್ದಾರೆ.
ದೇವಾಲಯದ ಆವರಣದಿಂದ ಮಗು ಅಳುವ ಶಬ್ಧ ಕೇಳಿದ್ದು, ಭಕ್ತರು ತಕ್ಷಣ ಹೋಂ ಗಾರ್ಡ್‍ಗೆ ಮಾಹಿತಿ ನೀಡಿದ್ದಾರೆ. ಸಿಬ್ಬಂದಿಗಳು ಹಾಗೂ ಭಕ್ತರು ಸುತ್ತಮುತ್ತ ಹುಡುಕಾಟ ನಡೆಸಿ ಹುಳುಗಳಿಂದ ಕೂಡಿದ್ದ ನವಜಾತ ಹೆಣ್ಣು ಮಗುವನ್ನು ಪತ್ತೆ ಮಾಡಿ, ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವೈದ್ಯರ ಪ್ರಕಾರ, ಶಿಶು ತಡರಾತ್ರಿ ಜನಿಸಿದ್ದು, ಸಕಾಲಿಕ ಚಿಕಿತ್ಸೆ, ಸ್ವಚ್ಛತೆ ಮತ್ತು ಔಷಧೋಪಚಾರದಿಂದ ಪ್ರಾಣಾಪಾಯದಿಂದ ಪಾರಾಗಿದೆ. ಪ್ರಸ್ತುತ ಶಿಶು ವೈದ್ಯರ ನಿಗಾದಲ್ಲಿದ್ದು, ಸುರಕ್ಷಿತವಾಗಿದೆ ಎಂದು ತಿಳಿಸಿದ್ದಾರೆ.
ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ದೇವಸ್ಥಾನದ ಸಿಸಿಟಿವಿ ದೃಶ್ಯಾವಳಿ, ಸುತ್ತಮುತ್ತಲಿನ ಮಾಹಿತಿ ಹಾಗೂ ಇತರ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಶಿಶುವನ್ನು ಬಿಸಾಡಿದವರ ಪತ್ತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್