

ರಾಯಚೂರು, 31 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಹೆಸರನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ ಸೇರಿದಂತೆ ಆಯಾ ತಹಶೀಲ್ದಾರ್ ಕಚೇರಿ, ಮಹಾನಗರ ಪಾಲಿಕೆಯ ಕಾರ್ಯಾಲಯದಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಹೇಳಿದರು.
ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಗೆ ಸಂಬ0ಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತ ಚುನಾವಣಾ ಆಯೋಗವು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯನ್ನಾಗಿ ಹಾಗೂ ಈ ಚುನಾವಣಾ ಕ್ಷೇತ್ರ ವ್ಯಾಪ್ತಿಗೊಳಪಡುವ ವಿಭಾಗದ ಎಲ್ಲಾ ಜಿಲ್ಲಾಧಿಕಾರಿಗಳನ್ನು, ಕುಲಬುರಗಿ ಮತ್ತು ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತರು, ಕಲಬುರಗಿ ವಿಭಾಗದ ಆಯಾ ಉಪ ವಿಭಾಗಕ್ಕೆ ಸಂಬ0ಧಪಟ್ಟ ಎಲ್ಲಾ ಸಹಾಯಕ ಆಯುಕ್ತರು ಹಾಗೂ ವಿಭಾಗದ ಎಲ್ಲಾ ಸಂಬ0ಧಪಟ್ಟ ತಾಲೂಕಿನ ತಹಸೀಲ್ದಾರರನ್ನು ಹಾಗೂ ಇತರೆ ತತ್ಸಮಾನ ಅಧಿಕಾರಿಯವರನ್ನು ಸಹಾಯಕ ಮತದಾರರ ನೊಂದಣಾಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದರು.
ಅರ್ಹತಾ ದಿನಾಂಕ: 01.11.2025ಕ್ಕೆ ಅನ್ವಯಿಸುವಂತೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು 2025ರ ಡಿಸೆಂಬರ್ 30ರಂದು ಸಂಪೂರ್ಣ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚೂರಪಡಿಸಲಾಗಿದ್ದು, ಮತದಾರರು ತಮ್ಮ ಹೆಸರನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ ಹಾಗೂ ಜಿಲ್ಲೆಯ ಆಯಾ ಸಂಬ0ಧಪಟ್ಟ ತಾಲ್ಲೂಕಿನ ತಹಸೀಲ್ದಾರ, ಮಹಾನಗರ ಪಾಲಿಕೆ ಕಾರ್ಯಾಲಯದಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ ಎಂದರು.
ಮತದಾನ ಕೇಂದ್ರಗಳ ವಿವರವನ್ನು ಆಯೋಗದ ಮಾರ್ಗಸೂಚಿಗಳನ್ವಯ 16ಕೀ.ಮೀ ವ್ಯಾಪ್ತಿಗೊಳಪಡುವ ಕನಿಷ್ಠ 30 ಮತದಾರರು ಒಳಪಡುವ ಮತದಾರರಿಗೆ ಮತಗಟ್ಟೆ ಸ್ಥಾಪಿಸಲು ಅವಕಾಶ ಕಲ್ಪಿಸಿದ್ದು, ಅದರಂತೆ ಪ್ರಸ್ತುತವಾಗಿ 145 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ನಿರಂತರ ನೋಂದಣಿ ಪ್ರಕ್ರಿಯೆಯಲ್ಲಿ ನೋಂದಾಯಿಸಲ್ಪಡುವ ಮತದಾರರಿಗನುಗುಣವಾಗಿ ಆಯೋಗದ ಮಾರ್ಗಸೂಚಿಗಳನ್ವಯ ಮತದಾನ ಕೇಂದ್ರಗಳನ್ನು ಮುಂದಿನ ದಿನಗಳಲ್ಲಿ ಚುನಾವಣಾ ಸಮಯದಲ್ಲಿ ಅಂತಿಮ ಗೊಳಿಸಲಾಗುವುದು ಎಂದರು.
ಮತದಾರರಲ್ಲಿ ಮನವಿ: ಇದೊಂದು ನಿರಂತರ ನೋಂದಣಿ ಪ್ರಕ್ರಿಯೆಯಾಗಿರುವ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಅರ್ಹ ಮತದಾರರು ಅವಶ್ಯಕ ದಾಖಲೆಗಳೊಂದಿಗೆ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆ. ಕಾರಣ ಅರ್ಹ ಶಿಕ್ಷಕರು ಹೆಚ್ಚಿನ ಆಸಕ್ತಿ ವಹಿಸಿ ಈ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊ0ಡು ಸುಭದ್ರ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕೆಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಶರಣಬಸವರಾಜ, ಲಿಂಗಸುಗೂರು ವಿಭಾಗದ ಸಹಾಯಕ ಆಯುಕ್ತರಾದ ಬಸವಣೆಪ್ಪ ಕುಲಶೆಟ್ಟಿ, ರಾಯಚೂರು ತಹಶೀಲ್ದಾರ್ ಸುರೇಶ ವರ್ಮ, ಸಿಂಧನೂರು ನಗರಸಭೆಯ ಪೌರಾಯುಕ್ತರಾದ ಶೃತಿ ಕೆ. ಸೇರಿದಂತೆ ಇತರರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್