
ಯಲಬುರ್ಗಾ, 04 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಯಲಬುರ್ಗಾ ತಾಲ್ಲೂಕು ಆಡಳಿತದ ವತಿಯಿಂದ ಡಿಸೆಂಬರ್ 6 ರಂದು ಬೆಳಿಗ್ಗೆ 9.30 ಗಂಟೆಗೆ ಮಹಾನ್ ಮಾನವತಾವಾದಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 69 ನೇ ಮಹಾ ಪರಿನಿರ್ವಾಣ ದಿನವನ್ನು ಯಲಬುರ್ಗಾ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ರವರ ವೃತ್ತದಲ್ಲಿನ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರೊಂದಿಗೆ ಆಚರಿಸಲಾಗುತ್ತಿದೆ.
ಈ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು, ವಿವಿಧ ಸಂಘ-ಸ0ಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಮಾಧ್ಯಮ ಸ್ನೇಹಿತರು ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಬೇಕು ಎಂದು ಯಲಬುರ್ಗಾ ತಹಶೀಲ್ದಾರ ಹಾಗೂ ರಾಷ್ಟಿಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷರು ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್