ನೂತನ ಬಡಾವಣೆ ನಿರ್ಮಾಣಕ್ಕೆ ಸರ್ಕಾರ ಬದ್ಧ : ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್
ರಾಯಚೂರು, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರಾಯಚೂರು ನಗರದಲ್ಲಿ ಬಹುನಿರೀಕ್ಷಿತ ನೂತನ ಸಿದ್ದರಾಮೇಶ್ವರ ಬಡಾವಣೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಬದ್ಧವಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್ ತಿಳಿಸಿದರು. ರಾಯಚೂರು ಜಿಲ್ಲಾಧ
ನೂತನ ಬಡಾವಣೆ ನಿರ್ಮಾಣಕ್ಕೆ ಸರ್ಕಾರ ಬದ್ಧ: ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್


ರಾಯಚೂರು, 04 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ರಾಯಚೂರು ನಗರದಲ್ಲಿ ಬಹುನಿರೀಕ್ಷಿತ ನೂತನ ಸಿದ್ದರಾಮೇಶ್ವರ ಬಡಾವಣೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಬದ್ಧವಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್ ತಿಳಿಸಿದರು.

ರಾಯಚೂರು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಗರಾಭಿವೃದ್ಧಿ ಇಲಾಖೆಗೆ ಸಂಬ0ಧಿಸಿದ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ನಗರಾಭಿವೃದ್ಧಿ ಪ್ರಾಧಿಕಾರದಿಂದ ರಾಯಚೂರು ನಗರದ ಹೊರವಲಯದಲ್ಲಿ ಸಿದ್ದರಾಮೇಶ್ವರ ಬಡಾವಣೆಯನ್ನು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕಡತವನ್ನು ಕೇಂದ್ರ ಕಚೇರಿಗೆ ಕಳುಹಿಸಿದರೆ ಕೂಡಲೇ ಅನುಮೋದನೆ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಶೌಚಾಲಯ ನಿರ್ಮಾಣಕ್ಕೆ ಆದ್ಯತೆ: 15ನೇ ಹಣಕಾಸು ಆಯೋಗ ನಿಗದಿಪಡಿಸಿರುವ ಎಲ್ಲಾ ಹಣವನ್ನು ಸಾರ್ವಜನಿಕ ಕಾಮಗಾರಿಗಳ ಅನುಷ್ಠಾನಕ್ಕೆ ವ್ಯಯಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮನೆಗಳಲ್ಲಿ, ಪ್ರತಿಯೊಬ್ಬರು ಶೌಚಾಲಯಗಳನ್ನು ನಿರ್ಮಿಸುವುದಕ್ಕೆ ಸಾರ್ವಜನಿಕರಿಗೆ ಉತ್ತೇಜನ ನೀಡಬೇಕು ಮತ್ತು ಹೆಚ್ಚು ಕೊಳಚೆ ಪ್ರದೇಶಗಳಿರುವ ಕಡೆ ಸಮುದಾಯ ಶೌಚಾಲಯಗಳನ್ನು ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ.

ಎಲ್ಲಾ ವರ್ಗದ ಜನರಿಗೆ ಅದರಲ್ಲೂ ಕೊಳಗೇರಿ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು. ನಗರದಲ್ಲಿ ವರ್ತುಲ ರಸ್ತೆ ನಿರ್ಮಾಣಕ್ಕೆ ರೂಪುರೇಷೆಯನ್ನು ಸಿದ್ಧಪಡಿಸಬೇಕು ಎಂದು ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದರು.

ಸ್ಲಂ ನಿವಾಸಿಗಳಿಗೆ ಇ ಖಾತಾ ನೀಡಲು ಸೂಚನೆ: ರಾಯಚೂರು ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಕೊಳಗೇರಿಗಳ ಅರ್ಹ ನಿವಾಸಿಗಳಿಗೆ ಖಾತೆ ಮಾಡಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬಡವರಿಗೆ ಇ-ಖಾತಾ ವಿತರಣೆ ಮಾಡಬೇಕು. ನೀರಿನ ಮತ್ತು ವಿದ್ಯುತ್ ಶುಲ್ಕವನ್ನು ನಿಗದಿತವಾಗಿ ಪಾವತಿ ಮಾಡುತ್ತಿರುವ ಮತ್ತು ಹಲವು ದಶಕಗಳಿಂದ ವಾಸವಿರುವ ಅರ್ಹ ನಿವಾಸಿಗಳೆಲ್ಲರಿಗೂ ಇ ಖಾತಾ ಮಾಡಿಕೊಡಲು ಕ್ರಮ ಕೈಗೊಳ್ಳಬೇಕು. ಯಾರಿಗೂ ಖಾತಾ ವಿಚಾರದಲ್ಲಿ ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾಗಿ ಸಚಿವರು ಹೇಳಿದರು.

ನಗರಾಭಿವೃದ್ಧಿ ಇಲಾಖೆಯಿಂದ ಬಾಕಿ ಇರುವ ಎಲ್ಲಾ ಕಾಮಗಾರಿಗಳನ್ನು 15 ದಿನಗಳೊಳಗಾಗಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಜುಬಿನ್ ಉತ್ಸಾಹಿ ಅಧಿಕಾರಿ : ದಕ್ಷ ಹಾಗೂ ಉತ್ಸಾಹಿ ಅಧಿಕಾರಿಯಾಗಿರುವ ಜುಬಿನ್ ಮೊಹಪಾತ್ರ ಅವರು ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ಅತ್ಯಂತ ಕಡಿಮೆ ಅವಧಿಯಲ್ಲಿಯೇ ಉತ್ತಮ ಕಾರ್ಯಗಳನ್ನು ಮಾಡಿದ್ದಾರೆ. ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರ ಮಾರ್ಗದರ್ಶನದಲ್ಲಿ ಜುಬಿನ್ ಮೊಹಪಾತ್ರ ಅವರು, ಮಹಾನಗರ ಪಾಲಿಕೆಯಲ್ಲಿ ಹೊಸ ಹೊಸ ಪ್ರಯೋಗ ಮಾಡುತ್ತ ರಾಯಚೂರು ಸಿಟಿಯ ಸೌಂದರ್ಯೀಕರಣಕ್ಕೆ ಶ್ರಮಿಸುತ್ತಿದ್ದು ಸಾರ್ವಜನಿಕರು ಅವರಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡುವುದಾಗಿ ಸಚಿವರು

ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಬಸನಗೌಡ ತುರವಿಹಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande