ಗ್ರಾಮ ಪಂಚಾಯಿತಿ ಸದಸ್ಯರ ಬೇಡಿಕೆಗಳಿಗಾಗಿ ಮಂಗಳವಾರ `ಬೆಳಗಾವಿ ಚಲೋ'
ಬಳ್ಳಾರಿ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಹದಿನೈದನೇ ಹಣಕಾಸು ಆಯೋಗದ ಅನುದಾನ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ಸಾಮಾಗ್ರಿ ವೆಚ್ಚವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಿ ಸಕಾಲದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಆಗ್ರಹಿಸಿ ಕರ್ನಾಟಕ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ
ಗ್ರಾಮ ಪಂಚಾಯಿತಿ ಸದಸ್ಯರ ಬೇಡಿಕೆಗಳಿಗಾಗಿ ; ಡಿಸೆಂಬರ್ 9ರ ಮಂಗಳಾವಾರ `ಬೆಳಗಾವಿ ಚಲೋ'


ಬಳ್ಳಾರಿ, 04 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಹದಿನೈದನೇ ಹಣಕಾಸು ಆಯೋಗದ ಅನುದಾನ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ಸಾಮಾಗ್ರಿ ವೆಚ್ಚವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಿ ಸಕಾಲದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಆಗ್ರಹಿಸಿ ಕರ್ನಾಟಕ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ ಡಿಸೆಂಬರ್ 9 ರ ಮಂಗಳವಾರ `ಬೆಳಗಾವಿ ಚಲೋ' ಹಮ್ಮಿಕೊಂಡಿದೆ.

ಬಳ್ಳಾರಿ ಜಿಲ್ಲಾ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ಜಿಲ್ಲಾ ಅಧ್ಯಕ್ಷರಾಗಿರುವ ಬಾಣಾಪುರ ನಾಗರಾಜ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿ, ಹದಿನೈದನೇ ಹಣಕಾಸು ಆಯೋಗದ ಅನುದಾನ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ಸಾಮಾಗ್ರಿ ವೆಚ್ಚವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಿ ಸಕಾಲದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ `ಬೆಳಗಾವಿ ಚಲೋ' ನಡೆದಿದೆ ಎಂದರು.

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ನೇತೃತ್ವದಲ್ಲಿ ಈ ಚಲೋ ನಡೆದಿದೆ. ಬಳ್ಳಾರಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಕುಟುಂಬದ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande