ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ; ಅರ್ಜಿ ಆಹ್ವಾನ
ಕೊಪ್ಪಳ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಪ್ರತಿಬಿಂಬಿಸಲು ಹಾಗೂ ಅವರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರತಿ ವರ್ಷ ಕಿತ್ತೂರು ರಾಣಿ ಚೆನ್ನಮ್ಮ
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ; ಅರ್ಜಿ ಆಹ್ವಾನ


ಕೊಪ್ಪಳ, 04 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಪ್ರತಿಬಿಂಬಿಸಲು ಹಾಗೂ ಅವರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರತಿ ವರ್ಷ ಕಿತ್ತೂರು ರಾಣಿ ಚೆನ್ನಮ್ಮ ಇವರ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ.

ಅದರಂತೆ 2025-26ನೇ ಸಾಲಿಗೆ ಈ ಪ್ರಶಸ್ತಿಗಾಗಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿ0ದ ಮತ್ತು ವ್ಯಕ್ತಿಗಳನ್ನೊಳಗೊಂಡ0ತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ವೀರಮಹಿಳೆ ಎಂದು ಗುರುತಿಸಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುತ್ತದೆ.

ಮಹಿಳೆಯರ ಹಾಗೂ ಸಂಸ್ಥೆಗಳ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿಗಳನ್ನು ಡಿಸೆಂಬರ್ 24 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ಇಲ್ಲಿಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande