
ಕೊಪ್ಪಳ, 04 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕುಕನೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಡಿಸೆಂಬರ್ 8 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲಾ ಮಟ್ಟದ ಪ್ರಧಾನಮಂತ್ರಿ ರಾಷ್ಟಿಯ ಶಿಶಿಕ್ಷ (ಅಪ್ರೆಂಟಿಶಿಪ್) ಮೇಳ-2025 ಅನ್ನು ಹಮ್ಮಿಕೊಳ್ಳಲಾಗಿದೆ.
ಮೇಳದಲ್ಲಿ ಬೆಂಗಳೂರಿನ ಗ್ರಾಮ ವಿಕಾಸ ಸಂಸ್ಥೆ, ಗಿಣಿಗೇರಾದ ಹೊಸಪೇಟೆ ಸ್ಟೀಲ್ ಲಿ., ಹೊಸ ಕನಕಾಪುರದ nsportation, Uniform Mukuda Sumi Special Steels, ಹಾಲವರ್ತಿಯ M/s MSPL Pellet & Beneficiation Plant, ಗಿಣಿಗೇರಾದ ಅಲ್ಟಾçಟೆಕ್ ಸಿಮೆಂಟ್ ಲಿ., ಕಂಪನಿಗಳು ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಿವೆ. ಐಟಿಐನ ಯಾವುದೇ ವೃತ್ತಿಯಲ್ಲಿ ಉತ್ತೀರ್ಣರಾದ 18 ರಿಂದ 25 ವಯೋಮಾನದ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದು.
ಮೇಳದಲ್ಲಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ಕ್ಯಾಂಟೀನ್, ಸಾರಿಗೆ, ಸಮವಸ್ತ ಮತ್ತು ಶೂಗಳ ಸೌಲಭ್ಯವನ್ನು ಒದಗಿಸಲಾಗುತ್ತದೆ. ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು 10ನೇ ತರಗತಿ ಹಾಗೂ ಐಟಿಐ ಉತ್ತೀರ್ಣ ಅಂಕಪಟ್ಟಿಗಳು, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ವೋಟರ್ ಕಾರ್ಡ್ ಅಥವಾ ಡಿ.ಎಲ್., ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‌ಬುಕ್ ಮತ್ತು ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ 6 ಭಾವಚಿತ್ರಗಳು ಮತ್ತು ವ್ಯಾಕ್ಸಿನೇಶನ್ ಪ್ರಮಾಣ ಪತ್ರದೊಂದಿಗೆ ಹಾಜರಾಗಬೇಕು.
ಅಭ್ಯರ್ಥಿಗಳು ತಮ್ಮ ಸ್ವಂತ ಕರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕುಕನೂರು ಕಚೇರಿಯನ್ನು ಸಂಪರ್ಕಿಸಬೇಕು ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್