
ನವದೆಹಲಿ, 04 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ದೆಹಲಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಗಾಳಿಯ ಮಾಲಿನ್ಯ ವಿರುದ್ಧ ಇಂಡಿ ಮೈತ್ರಿಕೂಟದ ವಿರೋಧ ಪಕ್ಷದ ನಾಯಕರು ಗುರುವಾರ ಸಂಸತ್ ಭವನದ ಮಕರ ದ್ವಾರದಲ್ಲಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ. ವೇಣುಗೋಪಾಲ್ ಮತ್ತು ಗೌರವ್ ಗೊಗೊಯ್ ಸೇರಿದಂತೆ ಹಲವು ಪಕ್ಷಗಳ ಹಿರಿಯ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ದೆಹಲಿಯ ಗಂಭೀರವಾಗುತ್ತಿರುವ ಮಾಲಿನ್ಯ ಸಮಸ್ಯೆಯನ್ನು , ನಾಯಕರು ಕೈಯಲ್ಲಿ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa