
ನವದೆಹಲಿ, 04 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಸಂಜೆ 7 ಗಂಟೆಗೆ ಎರಡು ದಿನಗಳ ಅಧಿಕೃತ ಭೇಟಿಗಾಗಿ ದೆಹಲಿಗೆ ಆಗಮಿಸಲಿದ್ದಾರೆ.
ಇಂದು ಮತ್ತು ನಾಳೆ ನಡೆಯುವ ಈ ಭೇಟಿಯಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 23ನೇ ಭಾರತ–ರಷ್ಯಾ ದ್ವಿಪಕ್ಷೀಯ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
ನಾಳೆ ಬೆಳಿಗ್ಗೆ ರಾಷ್ಟ್ರಪತಿ ಭವನದಲ್ಲಿ ತ್ರಿಸೇನಾ ಗೌರವ ಸ್ವೀಕರಿಸುವ ಪುಟಿನ್, ನಂತರ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಸಮಾದಿಗೆ ನಮನ ಸಲ್ಲಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಹೈದರಾಬಾದ್ ಹೌಸ್‌ನಲ್ಲಿ ನಡೆಯುವ ಶೃಂಗಸಭೆಯಲ್ಲಿ ರಕ್ಷಣಾ, ಇಂಧನ, ವ್ಯಾಪಾರ, ತಂತ್ರಜ್ಞಾನ, ಬಾಹ್ಯಾಕಾಶ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿನ ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆ ಇದೆ.
ಸಂಜೆ ಭಾರತ್ ಮಂಟಪದಲ್ಲಿ ಎರಡೂ ದೇಶಗಳ ವ್ಯಾಪಾರ ವೇದಿಕೆಯನ್ನು ಉದ್ದೇಶಿಸಿ ಇಬ್ಬರು ನಾಯಕರು ಮಾತನಾಡಲಿದ್ದಾರೆ. ರಾತ್ರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆಯೋಜಿಸಿರುವ ಔತಣಕೂಟದಲ್ಲಿ ಪುಟಿನ್ ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa