ಸರಕಾರಿ ಶಾಲೆಗಳಿಗೆ ಟೆಲಿಸ್ಕೋಪ್‌ ಯೋಜನೆ ವಿಸ್ತರಿಸಲು ಚಿಂತನೆ : ಸಚಿವ ಎನ್.ಎಸ್. ಭೋಸರಾಜು
ಬೆಂಗಳೂರು, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ಖಗೋಳ ವಿಜ್ಞಾನದ ಆಸಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆಯಿರಿಸಿದೆ. ಪ್ರಸ್ತುತ ಕ್ರೈಸ್‌ ವಸತಿ ಶಾಲೆಗಳಲ್ಲಿ ಅನುಷ್ಠಾನಗೊಳಿಸಿರುವ, ಟೆಲಿಸ್ಕೋಪ್‌ ವಿತರಣೆ
Bosraju


ಬೆಂಗಳೂರು, 04 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ಖಗೋಳ ವಿಜ್ಞಾನದ ಆಸಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆಯಿರಿಸಿದೆ. ಪ್ರಸ್ತುತ ಕ್ರೈಸ್‌ ವಸತಿ ಶಾಲೆಗಳಲ್ಲಿ ಅನುಷ್ಠಾನಗೊಳಿಸಿರುವ, ಟೆಲಿಸ್ಕೋಪ್‌ ವಿತರಣೆ ಯೋಜನೆಯನ್ನು ರಾಜ್ಯದ ಇನ್ನಷ್ಟು ಸರಕಾರಿ ಶಾಲೆಗಳಿಗೆ ವಿಸ್ತರಿಸುವ ಕುರಿತು ಚಿಂತನೆ ನಡೆಸಿದ್ದು, ಈ ಬಗ್ಗೆ ಮುಂದಿನ ಬಜೆಟ್‌ನಲ್ಲಿ ಅಗತ್ಯ ಅನುದಾನ ನೀಡಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಅವರು ತಿಳಿಸಿದ್ದಾರೆ.

ಇಂದು ಜವಾಹರಲಾಲ್‌ ನೆಹರು ತಾರಾಲಯದಲ್ಲಿ ಆಯೋಜಿಸಿದ್ದ ಕ್ರೈಸ್‌ ಶಾಲಾ ಶಿಕ್ಷಕರುಗಳಿಗೆ ಟೆಲಿಸ್ಕೋಪ್‌ ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಈಗಾಗಲೇ ಅನುಷ್ಠಾನಗೊಳಿಸಿರುವ ಟೆಲಿಸ್ಕೋಪ್ ವಿತರಣೆ ಯೋಜನೆಯನ್ನು ಇನ್ನಷ್ಟು ಸರಕಾರಿ ಶಾಲೆಗಳಿಗೆ ವಿಸ್ತರಿಸಲು ಉದ್ದೇಶಿಸಲಾಗಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಗೆ ಮುಂದಿನ ಆಯವ್ಯಯದಲ್ಲಿ ಹೆಚ್ಚುವರಿ ಅನುದಾನ ಕೋರಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಬರುವ ಒಟ್ಟು 833 ವಸತಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ತಲಾ ಒಂದರಂತೆ, ಒಟ್ಟಾರೆ ₹3.00 ಕೋಟಿ ವೆಚ್ಚದಲ್ಲಿ ದೂರದರ್ಶಕಗಳನ್ನು (ಟೆಲಿಸ್ಕೋಪ್) ವಿತರಿಸಲಾಗಿದೆ. ದೇಶದ ಯಾವುದೇ ಸರ್ಕಾರಿ ಇಲಾಖೆ ಇಂತಹದ್ದೊಂದು ಸಾಧನೆಯನ್ನು ಮಾಡಿಲ್ಲ ಎಂದು ಹೇಳಿದರು.

ಇಂದಿನ ಜ್ಞಾನಾಧಾರಿತ ಆರ್ಥಿಕ ವ್ಯವಸ್ಥೆಯಲ್ಲಿ ಯುವ ಪೀಳಿಗೆಗೆ ವೈಜ್ಞಾನಿಕ ಚಿಂತನೆ, ಮನೋಭಾವ ಮತ್ತು ವೈಚಾರಿಕತೆಯನ್ನು ಬೆಳೆಸುವುದು ಅತ್ಯಮೂಲ್ಯ ಕೊಡುಗೆಯಾಗಿದೆ. ವಿಜ್ಞಾನ ಶಿಕ್ಷಣವನ್ನು ಸದೃಢಗೊಳಿಸಲು ರಾಜ್ಯಾದ್ಯಂತ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande