
ಬಳ್ಳಾರಿ, 04 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ನಗರದ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಯಶವಂತ ಕುಮಾರ್ (24) ಜಾನಕಿ ಫ್ಯಾಕ್ಟರಿಯ ಕಚೇರಿಯಲ್ಲಿ ಕೆಲಸಕ್ಕೆ ಹೋಗಿ ಹಿಂದಿರುಗದೇ ಕಾಣೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಹರೆ : ಅಂದಾಜು 5.6 ಅಡಿ ಎತ್ತರ, ಗೋದಿ ಮೈಬಣ್ಣ, ಕೋಲುಮುಖ ಹೊಂದಿದ್ದು, ಬಲ ಎದೆಯ ಮೇಲೆ ಗರುಡ ಪಕ್ಷಿಯ ಹಚ್ಚೆ ಇರುತ್ತದೆ.
ಕಾಣೆಯಾದ ಸಂದರ್ಭದಲ್ಲಿ ಗ್ರೇ ಕಲರ್ ಟೀ ಶರ್ಟ್, ಬ್ಲಾಕ್ ಕಲರ್ ಜರ್ಕಿನ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಇಂಗ್ಲೀಷ್ ಹಿಂದಿ ಭಾಷೆಗಳನ್ನು ಮಾತನಾಡುತ್ತಾನೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ಯುವಕ ಬಗ್ಗೆ ಮಾಹಿತಿ ಸಿಕ್ಕಲ್ಲಿ ಗಾಂಧಿ ನಗರ ಪೊಲೀಸ್ ಠಾಣೆಯ ದೂ.08392-272192, ಪಿ.ಐ ಮೊ.9480803046 ಪಿಎಸ್‍ಐ ಮೊ.9480803082 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್