
ವಿಜಯಪುರ, 05 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯಾದ್ಯಂತ ನಕಲಿ ವೈದ್ಯರುಗಳ ಹಾವಳಿ ಕುರಿತ ಜಿಲ್ಲೆಯ ಕಚೇರಿಗಳಿಗೆ ಸಾರ್ವಜನಿಕರಿಂದ ದೂರು ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯಲ್ಲಿ ನಕಲಿ ವೈದ್ಯರುಗಳ ಹಾವಳಿ ತಡೆಗಟ್ಟಲು ಕೆ.ಪಿ.ಎಂ.ಇ ಅಡಿಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ತಾಲೂಕಾ ಅಧಿಕಾರಿಗ ಸಂಬಂಧಿಸಿದ ತಾಲೂಕಾ ಆರೋಗ್ಯಾಧಿಕಾರಿಗಳು ಹಾಗೂ ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ನಕಲಿ ವೈದ್ಯರನ್ನು ಪತ್ತೆ ಹಚ್ಚಲಾಗುತ್ತಿದೆ. ಈ ಪ್ರಕರಣಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಗಂಭೀರವಾಗಿ ಪರಿಗಣಿಸಿ, ನಕಲಿ ವೈದ್ಯರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.
ಈಗಾಗಲೇ ಕ್ಲಿನಿಕ್‌ನ್ನು ಬಂದ್ ಮಾಡಿ ಬೀಗ ಹಾಕಲಾಗಿದೆ. ವಿಜಯಪುರ ತಾಲೂಕಿನಲ್ಲಿ 04, ಬಸವನ ಬಾಗೇವಾಡಿ ತಾಲೂಕಿನಲ್ಲಿ 09, ಮುದ್ದೇಬಿಹಾಳ ತಾಲೂಕಿನಲ್ಲಿ 03, ಇಂಡಿ ತಾಲೂಕಿನಲ್ಲಿ 04 ಹಾಗೂ ಸಿಂದಗಿ ತಾಲೂಕಿನಲ್ಲಿ 2 ಹೀಗೆ ಒಟ್ಟು 22 ನಕಲಿ ವೈದ್ಯರನ್ನು ಪತ್ತೆ ಮಾಡಲಾಗಿದ್ದು, ಜಿಲ್ಲೆಯಲ್ಲಿ ನಕಲಿ ವೈದ್ಯರು ಕರ್ತವ್ಯ ನಿರ್ವಹಿಸುತ್ತಿರುವುದು ಕಂಡುಬಂದಲ್ಲಿ ಸಾರ್ವಜನಿರು ಸಂಬಂಧಪಟ್ಟ ತಾಲೂಕಾ ಆರೋಗ್ಯಾಧಿಕಾರಿಗಳಿಗೆ ದೂರು ಸಲ್ಲಿಸಬಹುದಾಗಿದೆ.
ಸಾರ್ವಜನಿಕರು ಆರೋಗ್ಯಕ್ಕೆ ಸಂಬಂಧಿಸಿದಂತೆ ಹತ್ತಿರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ/ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಳ್ಳುವಂತೆ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಸಂಪತ್ ಗುಣಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande