ಟಿಇಟಿಗೆ ನಿಷೇಧಾಜ್ಞೆ ಜಾರಿಗೊಳಿಸಿದ ಡಿಸಿ
ವಿಜಯಪುರ, 05 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಇದೇ ಡಿಸೆಂಬರ್ 7 ರಂದು ಶಿಕ್ಷಕರ ಅರ್ಹತಾ ( ಟಿಇಟಿ-2025) ಪರೀಕ್ಷೆಗಳು ವಿಜಯಪುರ ನಗರದ 64 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ. ಪರೀಕ್ಷೆಗಳು ಸುವ್ಯವಸ್ಥಿತವಾಗಿ ನಡೆಯಲು ಮುಂಜಾಗ್ರತಾ ಕ್ರಮವಾಗಿ 64 ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯ ಪ್ರದೇಶದಲ
ಟಿಇಟಿಗೆ ನಿಷೇಧಾಜ್ಞೆ ಜಾರಿಗೊಳಿಸಿದ ಡಿಸಿ


ವಿಜಯಪುರ, 05 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಇದೇ ಡಿಸೆಂಬರ್ 7 ರಂದು ಶಿಕ್ಷಕರ ಅರ್ಹತಾ ( ಟಿಇಟಿ-2025) ಪರೀಕ್ಷೆಗಳು ವಿಜಯಪುರ ನಗರದ 64 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ. ಪರೀಕ್ಷೆಗಳು ಸುವ್ಯವಸ್ಥಿತವಾಗಿ ನಡೆಯಲು ಮುಂಜಾಗ್ರತಾ ಕ್ರಮವಾಗಿ 64 ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯ ಪ್ರದೇಶದಲ್ಲಿ ಅಂದು ಬೆಳಿಗ್ಗೆ 8 ಗಂಟೆಯಿಂದ ಪರೀಕ್ಷೆ ಮುಕ್ತಾಯದವರೆಗೆ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಅವರು ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರ್‌ನೆಟ್ ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ತೆರೆಯದಂತೆ ಅವರು ಆದೇಶಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande