ಬಳ್ಳಾರಿ : ತೋಟಗಾರಿಕೆ ಇಲಾಖೆ ಅರ್ಜಿ ಆಹ್ವಾನ
ಬಳ್ಳಾರಿ, 05 ಡಿಸೆಂಬರ್ (ಹಿ.ಸ.) : ಆ್ಯಂಕರ್ : ತೋಟಗಾರಿಕೆ ಇಲಾಖೆಯು ಬಳ್ಳಾರಿ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2026-27 ನೇ ಸಾಲಿನಲ್ಲಿ ಮನರೇಗಾ ಯೋಜನೆಯಡಿ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಾತ್ಮಗಾ
ಬಳ್ಳಾರಿ : ತೋಟಗಾರಿಕೆ ಇಲಾಖೆ ಅರ್ಜಿ ಆಹ್ವಾನ


ಬಳ್ಳಾರಿ, 05 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ತೋಟಗಾರಿಕೆ ಇಲಾಖೆಯು ಬಳ್ಳಾರಿ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2026-27 ನೇ ಸಾಲಿನಲ್ಲಿ

ಮನರೇಗಾ ಯೋಜನೆಯಡಿ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ :

ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೆÇೀಟ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಗುಲಾಬಿ ಹಾಗೂ ಇತರೆ ಬೆಳೆಗಳಿಗೆ. ಆಸಕ್ತ ರೈತ ಫಲಾನುಭವಿಗಳು ಈ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಅರ್ಜಿ ಸಲ್ಲಿಸಲು ಡಿ.10 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗೆ ಸಂಪರ್ಕಿಸಿ, ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ಬಳ್ಳಾರಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಮಹೇಶ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande