ಕುಕನೂರಿನಲ್ಲಿ ಆರೋಗ್ಯ ಇಲಾಖೆಯಿಂದ ವಸ್ತು ಪ್ರದರ್ಶನ
ಕೊಪ್ಪಳ (ಕುಕನೂರು), 05 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಯಲಬುರ್ಗಾ ಮತ್ತು ಸಮುದಾಯ ಆರೋಗ್ಯ ಕೇಂದ್ರ ಕುಕನೂರು ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಗುದ್ನೇಶ್ವರ ಜಾತ
ಕುಕನೂರಿನಲ್ಲಿ ಆರೋಗ್ಯ ಇಲಾಖೆಯಿಂದ ವಸ್ತು ಪ್ರದರ್ಶನ


ಕುಕನೂರಿನಲ್ಲಿ ಆರೋಗ್ಯ ಇಲಾಖೆಯಿಂದ ವಸ್ತು ಪ್ರದರ್ಶನ


ಕೊಪ್ಪಳ (ಕುಕನೂರು), 05 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಯಲಬುರ್ಗಾ ಮತ್ತು ಸಮುದಾಯ ಆರೋಗ್ಯ ಕೇಂದ್ರ ಕುಕನೂರು ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಗುದ್ನೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನದ ಆವರಣದಲ್ಲಿ ಇಲಾಖೆ ಯೋಜನೆಗಳು ಮತ್ತು ಸಾಂಕ್ರಾಮಿಕ/ಅಸಾ0ಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ವಸ್ತು ಪ್ರದರ್ಶನ ಕಾರ್ಯಕ್ರಮ ಹಾಗೂ ಪ್ರಥಮ ಚಿಕಿತ್ಸಾ ಕೇಂದ್ರ ಸ್ಥಾಪಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನೀಲಗುಂದ ಗುದ್ನೇಪ್ಪನಮಠದ ಪ್ರಭುಲಿಂಗ ಮಹಾಸ್ವಾಮಿ ಇವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳು ಮತ್ತು ಸಾಂಕ್ರಾಮಿಕ/ಅಸಾ0ಕ್ರಾಮಿಕ ರೋಗಗಳ ನಿಯಂತ್ರಣ ಕುರಿತು, ವಸ್ತು ಪ್ರದರ್ಶನವನ್ನು ಜಾತ್ರೆಯಲ್ಲಿ ಏರ್ಪಡಿಸುವಂತೆ ನಿರ್ದೇಶನವಿರುವುದರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳದ ಜಿಲ್ಲಾ ಮಟ್ಟದಿಂದ ಈ ವಸ್ತುಪ್ರದರ್ಶನ ಕಾರ್ಯಕ್ರಮ ಏರ್ಪಡಿಸಿದ್ದು, ಸಾರ್ವಜನಿಕರಿಗೆ ಮಹತ್ವಪೂರ್ಣ ಕಾರ್ಯಕ್ರಮವಾಗಿದೆ. ಪ್ರಸ್ತುತ ದಿನಮಾನಗಳಲ್ಲಿ ಸಾಂಕ್ರಾಮಿಕ/ಅಸಾ0ಕ್ರಾಮಿಕ ಖಾಯಿಲೆಗಳಿಂದ ಸಾರ್ವಜನಿಕರಿಗೆ ನೆಮ್ಮದಿ ಇಲ್ಲದಂತಾಗಿದೆ ಎಂದು ಹೇಳಿದರು.

ಪ್ರತಿಯೊಬ್ಬ ಸಾರ್ವಜನಿಕರು ಇಲಾಖೆಯಲ್ಲಿ ಲಭ್ಯವಿರುವ ಜನನಿ ಸುರಕ್ಷಾ ಯೋಜನೆ, ಜನನಿ-ಶಿಶು ಸುರಕ್ಷಾ ಯೋಜನೆ, ಡಾ.ಪುನೀತ್ ರಾಜಕುಮಾರ ಹೃದಯ ಜ್ಯೋತಿ ಯೋಜನೆ, ತಾಯಿ-ಮಕ್ಕಳ ಆರೋಗ್ಯ ಸುರಕ್ಷಿತ ಕಾರ್ಯಕ್ರಮ, ಕುಟುಂಬ ಕಲ್ಯಾಣ ಯೋಜನೆಗಳಾದ ತಾತ್ಕಾಲಿಕ ಮತ್ತು ಶಾಶ್ವತ ವಿಧಾನಗಳು, ಎನ್.ಪಿ.ಪಿ.ಸಿ.ಡಿ, ಪಿಸಿ&ಪಿ.ಎನ್.ಡಿ.ಟಿ, ಜೀವನ ಶೈಲಿಯಿಂದ ಬರುವ ರೋಗಗಳಾದ ಅಧಿಕ ರಕ್ತದೊತ್ತಡ(ಬಿ.ಪಿ), ಮಧುಮೇಹ, ಕ್ಯಾನ್ಸರ್, ಬೇಡವಾದ ಬೊಜ್ಜು, ಹೃದಯ ಸಂಬ0ಧಿ ಖಾಯಿಲೆ ಹಾಗೂ ಪಾರ್ಶ್ವವಾಯು, ಮಾನಸಿಕ ಆರೋಗ್ಯ ಖಾಯಿಲೆ ಚಿಕಿತ್ಸೆ, ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ, ಸೋಂಕಿತ ಸೊಳ್ಳೆಗಳಿಂದ ಹರಡುವ ಡೆಂಗ್ಯೂ-ಚಿಕನ್‌ಗುನ್ಯಾ, ಮಲೇರಿಯಾ, ಮೆದುಳು ಜ್ವರ ನಿಯಂತ್ರಣ, ಬಾಲ್ಯವಿವಾಹ ನಿಷೇಧ ಕುರಿತು, ಚಳಿಗಾಲ ಸಮಯದಲ್ಲಿ ಸಾರ್ವಜನಿಕರು ಆರೋಗ್ಯ ರಕ್ಷಣೆಗಾಗಿ ಅನುಸರಿಸುವ ಮುಂಜಾಗೃತ ಕ್ರಮಗಳ ಬಗ್ಗೆ ಮತ್ತು ವಿವಿಧ ಯೋಜನೆಗಳ ಕುರಿತು ವಿವಿಧ ಚಿತ್ರಗಳ ಮೂಲಕ ಸಾರ್ವಜನಿಕರಿಗೆ ಆಪ್ತಸಮಾಲೋಚನೆ ನೀಡುವುದರ ಮೂಲಕ ಹಾಗೂ ಆಡಿಯೋ ಜಿಂಗಲ್ಸ್ಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಂಡು ತಮ್ಮ ಆರೋಗ್ಯ ಕಾಪಾಡಿಕೊಳ್ಳುವಂತೆ ಸಾರ್ವಜನಿಕರಿಗೆ ತಿಳಿಸಿದರು.

ತಾಲೂಕಾ ಆರೋಗ್ಯಾಧಿಕಾರಿ ಡಾ. ನೇತ್ರಾವತಿ ಇವರು ಸಾರ್ವಜನಿಕರಿಗೆ ಕರಪತ್ರ ವಿತರಿಸಿದರು. ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತಿಯ ಮುಖ್ಯ ಅಧಿಕಾರಿಗಳಾದ ನಬೀಸಾಬ್ ಕಂದಗಲ್, ಆಡಳಿತ ವೈದ್ಯಾಧಿಕಾರಿ ಡಾ.ರಾಮಕೃಷ್ಣ ರೆಡ್ಡಿ, ಮಕ್ಕಳ ತಜ್ಞರಾದ ಡಾ.ಮಂಜುನಾಥ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ, ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಡಾ.ಲಾಲಸಾಬ್ ಹಾಳಕೇರಿ, ಪ್ರಭಾರಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕಾಳಪ್ಪ ಕುಂಬಾರ್, ಆರೋಗ್ಯ ನಿರೀಕ್ಷಣಾಧಿಕಾರಿ ಜಗನ್ನಾಥ, ಬಸವರೆಡ್ಡಿ, ಸಮುದಾಯ ಆರೋಗ್ಯಾಧಿಕಾರಿಗಳು, ಆರ್.ಕೆ.ಎಸ್.ಕೆ ಕಾರ್ಯಕ್ರಮದ ಆಪ್ತಸಮಾಲೋಚಕರು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಇತರೆ ಸಿಬ್ಬಂದಿಗಳು, ಗ್ರಾಮದ ಮುಖಂಡರಾದ ಮಲ್ಲನಗೌಡ್ರು ಕೋನನಗೌಡ್ರು, ಸಿದ್ದಯ್ಯ ಕಳ್ಳಿಮಠ, ಜಗನ್ನಾಥ, ರುದ್ರಯ್ಯ ಎಸ್.ವಿ, ನಾಗಯ್ಯ ಕೊಪ್ಪಳ, ವೀರಯ್ಯ ಟಿ, ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande