ಹೊಸಪೇಟೆ : ಡಿ.10 ರಂದು ಸಿರಿಧಾನ್ಯ ಖಾದ್ಯಗಳ ಪಾಕ ಸ್ಪರ್ಧೆ
ಹೊಸಪೇಟೆ, 05 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕೃಷಿ ಇಲಾಖೆಯಿಂದ ಜಿಲ್ಲಾ ಮಟ್ಟದ ಸಿರಿಧ್ಯಾನ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಡಿಸೆಂಬರ್ 10 ರಂದು ಬೆಳಿಗ್ಗೆ 10 ಗಂಟೆಗೆ ಎನ್.ಸಿ.ಕಾಲೋನಿ, ನ್ಯಾಷನಲ್ ಕಾಲೇಜ್ ಹಿಂಭಾಗ, ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ ಎಂದು
ಹೊಸಪೇಟೆ : ಡಿ.10 ರಂದು ಸಿರಿಧಾನ್ಯ ಖಾದ್ಯಗಳ ಪಾಕ ಸ್ಪರ್ಧೆ


ಹೊಸಪೇಟೆ, 05 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕೃಷಿ ಇಲಾಖೆಯಿಂದ ಜಿಲ್ಲಾ ಮಟ್ಟದ ಸಿರಿಧ್ಯಾನ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಡಿಸೆಂಬರ್ 10 ರಂದು ಬೆಳಿಗ್ಗೆ 10 ಗಂಟೆಗೆ ಎನ್.ಸಿ.ಕಾಲೋನಿ, ನ್ಯಾಷನಲ್ ಕಾಲೇಜ್ ಹಿಂಭಾಗ, ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸಿರಿಧಾನ್ಯ ಖಾದ್ಯಗಳು, ಸಿರಿಧಾನ್ಯಗಳಾದ ಜೋಳ, ರಾಗಿ, ನವಣೆ, ಸಜ್ಜೆ, ಹಾರಕ, ಬರಗು ಮತ್ತು ಸಾಮೆ ಬೆಳೆಗಳಿಂದ ಸಿಹಿ ಮತ್ತು ಖಾರ ಖಾದ್ಯಗಳನ್ನು ತಯಾರಿಸುವುದು. ಮರೆತು ಹೋದ ಖಾದ್ಯಗಳು (ಐಚಿಟಿಜ ಡಿಚಿಛಿes ಠಿಡಿoಜuಛಿಣs) ದೇಸಿ ತಳಿಗಳು ಪೌಷ್ಟಿಕಾಂಶದ ಮೌಲ್ಯ, ಬಳಕೆಯಾಗದ ಬೆಳೆಗಳು, ಮರೆತು ಹೋದ ಆಹಾರಗಳು, ರೈತರ ಸಾಂಪ್ರಾದಾಯಿಕ, ಪರಂಪರೆ ಜಾನಪದ ಪ್ರಭೇದಗಳು ಎಂದೂ ಕರೆಯಲ್ಪಡುವ ದೇಸಿ ತಳಿಗಳು, ಸ್ಥಳೀಯ ಅಥವಾ ಸಾಂಪ್ರದಾಯಿಕ ಕೃಷಿ ಪದ್ಧತಿಯಿಂದ ಅಭಿವೃದ್ಧಿ, ನಿರ್ವಹಿಸಲ್ಪಡುವ ವಿಶಿಷ್ಟ ಗುಣಲಕ್ಷಣಗಳು, ಪೆÇೀಷಕಾಂಶಗಳಲ್ಲಿ ಸಮೃದ್ಧ ಮತ್ತು ಭೌಗೋಳಿಕ ಮೂಲಗಳ ಕಾರಣದಿಂದ ಕೆಲವೇ ರೈತರು ಬೆಳೆಯುವ ದೇಸಿ ತಳಿಗಳಿಂದ ತಯಾರಿಸುವ ಖಾದ್ಯಗಳು. ಮರೆತು ಹೋದ ಖಾದ್ಯಗಳಡಿ ಸಿರಿಧಾನ್ಯಗಳನ್ನು ಹೊರತುಪಡಿಸಿ ಇತರೆ ದೇಸಿ ತಳಿಗಳಡಿ ಬರುವ ಆಹಾರ ಮತ್ತು ಎಣ್ಣೆಕಾಳು ಬೆಳೆಗಳ, ತರಕಾರಿ ಮತ್ತು ಹಣ್ಣುಗಳ ಇತ್ಯಾದಿ ಖಾದ್ಯಗಳನ್ನು ತಯಾರಿಸುವುದು, ಪ್ರತಿ ಸ್ಪರ್ಧಿಗೆ ಒಂದೇ ತಿನಿಸು,ಖಾದ್ಯ (ಆಡುಗೆ) ಸಿಹಿ, ಖಾರ ಮತ್ತು ದೇಸಿ ತಳಿಗಳಿಂದ ತಯಾರಿಸುವ ಖಾದ್ಯಗಳ ತಿನಿಸು ಮಾಡಲು ಅವಕಾಶವಿರುತ್ತದೆ. ಜಿಲ್ಲೆಯ ಎಲ್ಲಾ ಸಾರ್ವಜನಿಕರು ಭಾಗವಹಿಸಲು ಅವಕಾಶವಿರುತ್ತದೆ.

ವಿದ್ಯಾರ್ಥಿಗಳು, ಕೃಷಿ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳಿಗೆ ಭಾಗವಹಿಸಲು ಅವಕಾಶವಿರುವುದಿಲ್ಲ. ಈಗಾಗಲೇ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯ ಮಟ್ಟದಲ್ಲಿ ಮೊದಲನೇ, ದ್ವಿತೀಯ ಮತ್ತು ತೃತೀಯ ಬಹುಮಾನ ಪಡೆದ ಸ್ಪರ್ಧಿಗಳಿಗೆ ಪ್ರಸ್ತುತ ವರ್ಷದಲ್ಲಿ ಸಿರಿಧಾನ್ಯ ಪಾಕಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ. ಇಂದಿನವರು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಮನೆಯಲ್ಲಿಯೇ ತಯಾರಿಸಿದ ಸಿರಿಧಾನ್ಯ, ಖಾದ್ಯದ ತಿನಿಸು (ಅಡುಗೆ) ಪ್ರದರ್ಶಿಸಲು ಅವಕಾಶವಿರುತ್ತದೆ ಹಾಗೂ ಬಳಸುವ ಸಾಮಾಗ್ರಿಗಳ ಮಾದರಿಗಳನ್ನು ಕಡ್ಡಾಯವಾಗಿ ಪ್ರದರ್ಶಿಸುವುದು. ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಒಂದು ಸಿಹಿ, ಖಾರ (ಸಿರಿಧಾನ್ಯ ಖಾದ್ಯಗಳಿಗೆ ಮಾತ್ರ) ಖಾದ್ಯದ ತಿನಿಸನ್ನು ಆಯ್ಕೆ ಮಾಡಲಾಗುವುದು. ಸ್ಪರ್ಧಿಗಳು ನಿಗಧಿಪಡಿಸಿದ ಸ್ಥಳದಲ್ಲಿ ಸರಿಯಾದ ಸಮಯಕ್ಕೆ ತಮ್ಮ ಅಡುಗೆ ಸಾಮಾಗ್ರಿಗಳೊಂದಿಗೆ ಹಾಜರಿರಬೇಕು.

ಹೆಚ್ಚಿನ ಮಾಹಿತಿಗಾಗಿ ತಮ್ಮ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸಂಪರ್ಕಿಸಬೇಕೆಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande