ಹೊಸಪೇಟೆ : ರವಿವಾರ ಟಿಇಟಿ ಪರೀಕ್ಷೆ : ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಕ್ರಮ
ಹೊಸಪೇಟೆ, 05 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ರವಿವಾರ ನಡೆಯುವ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯ
ಹೊಸಪೇಟೆ : ಡಿಸೆಂಬರ್.07 ರಂದು  ಟಿಇಟಿ ಪರೀಕ್ಷೆ : ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಕ್ರಮ


ಹೊಸಪೇಟೆ : ಡಿಸೆಂಬರ್.07 ರಂದು  ಟಿಇಟಿ ಪರೀಕ್ಷೆ : ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಕ್ರಮ


ಹೊಸಪೇಟೆ, 05 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ರವಿವಾರ ನಡೆಯುವ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರವಿವಾರ ಬೆಳಿಗ್ಗೆ 9:30 ರಿಂದ 12 ಗಂಟೆಯ ವರಗೆ ಒಂದನೆಯ ಅವಧಿಯಲ್ಲಿ 5 ಪರೀಕ್ಷಾ ಕೇಂದ್ರಗಳಲ್ಲಿ 2.128 ಮತ್ತು 2 ರಿಂದ 4:30ರ ವರಗೆ ಎರಡನೆಯ ಅವಧಿಯ 19 ಪರೀಕ್ಷಾ ಕೇಂದ್ರಗಳಲ್ಲಿ 6.570 ಪರೀಕ್ಷಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಪರೀಕ್ಷೆ ಕೇಂದ್ರದಲ್ಲಿ ಕಡ್ಡಾಯವಾಗಿ ಸಿಸಿಟಿವಿಗಳನ್ನು ಅಳವಡಿಕೆ ಮಾಡಬೇಕು ಮತ್ತು ಅವುಗಳನ್ನು ಸುಸ್ಥಿತಿಯಲ್ಲಿ ಇರಿಸಬೇಕು.

ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳು ಸೇರಿದಂತೆ ವಿದ್ಯುತ್ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು. ಎಲ್ಲಾ ಪರೀಕ್ಷಾ ಮೇಲ್ವಿಚಾರಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಹಾಜರಿರಬೇಕು. ಪರೀಕ್ಷಾ ಮೇಲ್ವಿಚಾರಕರು ಖುದ್ದಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಯಾವುದೇ ನೂನ್ಯತೆಗಳಿದ್ದಲ್ಲಿ ಪರಿಶೀಲಿಸಿ ಅದನ್ನು ಪರಿಹರಿಸಲು ಕ್ರಮ ವಹಿಸಬೇಕು.

ಪ್ರತಿ 3 ರಿಂದ 4 ಪರೀಕ್ಷಾ ಕೇಂದ್ರಕ್ಕೆ ಒಬ್ಬರು ಮಾರ್ಗಾಧಿಕಾರಿಯನ್ನು ನೇಮಿಸಲಾಗಿದೆ. ಒಟ್ಟು 05 ಪರೀಕ್ಷಾ ಮಾರ್ಗಗಳನ್ನು ಮಾಡಲಾಗಿದ್ದು ಇದಕ್ಕೆ ಗ್ರೂಪ್-ಬಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಪರೀಕ್ಷಾ ದಿನದಂದು ಪರೀಕ್ಷಾರ್ಥಿಗಳ ನೋಂದಣಿ, ಹಾಜರಿ ಮತ್ತು ಗೈರು ಹಾಜರಿಯ ಕುರಿತು ಮತ್ತು ಪರೀಕ್ಷೆಯಲ್ಲಿ ಏನಾದರೂ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಅದರ ವಿವಿರಗಳ ವರದಿಯನ್ನು ಪರೀಕ್ಷಾ ಕೇಂದ್ರದ ಲಾಗಿನ್ ಮೂಲಕ ಅಪೆÇ್ಲೀಡ್ ಮಾಡಿ ಪ್ರತಿಯನ್ನು ಕಾರ್ಯಾಲಯಕ್ಕೆ ನೀಡಬೇಕು ಎಂದರು.

ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಮಂಜುನಾಥ ಮಾತನಾಡಿ, ಪ್ರತಿ ಪರೀಕ್ಷಾ ಕೇಂದ್ರಕ್ಕೆ 2 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಮತ್ತು ಪರೀಕ್ಷೆಗಳು ಸುಗಮವಾಗಿ ನಡೆಯುವ ಹಿತದೃಷ್ಟಿಯಿಂದ ಎಲ್ಲಾ ಅಗತ್ಯ ಭದ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಈ ವೇಳೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರಾಮಚಂದ್ರಪ್ಪ, ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿ, ಸಿಬ್ಬಂದಿ ವರ್ಗದವರು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande