
ಹೊಸಪೇಟೆ, 05 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರದ ಕಚೇರಿಯಲ್ಲಿ ಕಡ್ಡಾಯವಾಗಿ ಡಿಸೆಂಬರ್ 10 ರಂದು ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅದೇಶಿಸಿದ್ದಾರೆ.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಪ್ರತಿ ಜಿಲ್ಲೆಯಲ್ಲಿ ಮತ್ತು ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಮಾನವ ಹಕ್ಕುಗಳ ದಿನಾಚರಣೆಯನ್ನು ಪ್ರತೀ ವರ್ಷದಂತೆ ಈ ವರ್ಷವೂ ಸಹ ವಿಶೇಷವಾಗಿ ಮಾನವ ಹಕ್ಕುಗಳ ದಿನಾಚರಣೆಯನ್ನು ಆಚರಿಸಲು ಆಯೋಗವು ನಿರ್ಧಾರವನ್ನು ಕೈಗೊಂಡಿದ್ದು, ಆಯೋಗದ ನಿರ್ದೇಶನದಂತೆ, ಡಿಸೆಂಬರ್ 10 ರಂದು ಎಲ್ಲಾ ಇಲಾಖೆಗಳ ಕಚೇರಿಗಳಲ್ಲಿ ಮಾನವ ಹಕ್ಕುಗಳ ದಿನಾಚರಣೆ ಆಚರಿಸಬೇಕು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್