ರಾಷ್ಟ್ರಪತಿ ಭವನದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್‌ಗೆ ಭವ್ಯ ಸ್ವಾಗತ
ನವದೆಹಲಿ, 05 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಭಾರತಕ್ಕೆ ಎರಡು ದಿನಗಳ ಭೇಟಿಗಾಗಿ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ಔಪಚಾರಿಕವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪುಟಿನ್ ಅ
Welcome


ನವದೆಹಲಿ, 05 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಭಾರತಕ್ಕೆ ಎರಡು ದಿನಗಳ ಭೇಟಿಗಾಗಿ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ಔಪಚಾರಿಕವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಪುಟಿನ್ ಅವರಿಗೆ ಭಾರತದ ತ್ರಿವಿಧ ದಳಗಳ ಗೌರವ ರಕ್ಷೇ ನೀಡಲಾಯಿತು. ರಾಷ್ಟ್ರಪತಿ ಭವನದ ಭವ್ಯ ಆಡಳಿತಿಕ ಆವರಣದಲ್ಲಿ ನಡೆದ ಈ ಸಮಾರಂಭದಲ್ಲಿ ವಿದೇಶಾಂಗ ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಗೂ ರಷ್ಯಾದ ಪ್ರತಿನಿಧಿ ತಂಡದ ಸದಸ್ಯರು ಭಾಗವಹಿಸಿದರು.

ಭಾರತ–ರಷ್ಯಾ ದ್ವಿಪಕ್ಷೀಯ ಸಂಬಂಧಗಳ ಮಹತ್ವದ ಸಂದೇಶ ಸಾರುವಂತೆ ನಡೆದ ಈ ಅಧಿಕೃತ ಸ್ವಾಗತ ಕಾರ್ಯಕ್ರಮದ ನಂತರ, ಪುಟಿನ್ ಪ್ರಧಾನ ಮಂತ್ರಿಯವರೊಂದಿಗೆ ಮಾತುಕತೆಗಾಗಿ ಹೈದರಾಬಾದ್ ಹೌಸ್‌ಗೆ ತೆರಳಲಿದ್ದಾರೆ.

ಇದೇ ವೇಳೆ, ವ್ಲಾಡಿಮಿರ್ ಪುಟಿನ್ ರಾಜ್‌ಘಾಟ್‌ಗೆ ಭೇಟಿ ನೀಡಿ, ಮಹಾತ್ಮ ಗಾಂಧಿಯವರ ಸಮಾಧಿಗೆ ಪುಷ್ಪಾರ್ಚನೆ ಮೂಲಕ ಗೌರವ ಸಲ್ಲಿಸಿದರು. ಶಾಂತಿ ಮತ್ತು ಅಹಿಂಸೆಯ ಸಂದೇಶವನ್ನು ಸಾರಿದ ಗಾಂಧಿಯವರಿಗೆ ನಮನ ಸಲ್ಲಿಸಿದ ನಂತರ, ಪುಟಿನ್ ಅತಿಥಿ ಪುಸ್ತಕದಲ್ಲಿ ತಮ್ಮ ಸಂದೇಶವನ್ನು ಸಹ ದಾಖಲಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande