ಕ್ರೀಡಾ ಪ್ರಶಸ್ತಿ : ಅರ್ಜಿ ಸಲ್ಲಿಸಲು ಡಿಸೆಂಬರ್ 10ರವರೆಗೆ ಅವಧಿ ವಿಸ್ತರಣೆ
ರಾಯಚೂರು, 05 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2024ರ ಏಕಲವ್ಯ ಮತ್ತಿತರ ಕ್ರೀಡಾ ಪ್ರಶಸ್ತಿ ಹಾಗೂ ನಗದು ಪ್ರೋತ್ಸಾಹಧನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯ ಅವಧಿಯನ್ನು ಡಿಸೆಂಬರ್ 10ರವರೆಗೆ ವಿಸ್ತರಿಸಲಾಗಿದೆ. ಅರ್ಹ ಕ್ರೀಡಾಪಟ
ಕ್ರೀಡಾ ಪ್ರಶಸ್ತಿ : ಅರ್ಜಿ ಸಲ್ಲಿಸಲು ಡಿಸೆಂಬರ್ 10ರವರೆಗೆ ಅವಧಿ ವಿಸ್ತರಣೆ


ರಾಯಚೂರು, 05 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2024ರ ಏಕಲವ್ಯ ಮತ್ತಿತರ ಕ್ರೀಡಾ ಪ್ರಶಸ್ತಿ ಹಾಗೂ ನಗದು ಪ್ರೋತ್ಸಾಹಧನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯ ಅವಧಿಯನ್ನು ಡಿಸೆಂಬರ್ 10ರವರೆಗೆ ವಿಸ್ತರಿಸಲಾಗಿದೆ.

ಅರ್ಹ ಕ್ರೀಡಾಪಟುಗಳು ಪ್ರಶಸ್ತಿಗಳಾದ ಏಕಲವ್ಯ ಪ್ರಶಸ್ತಿ 2024, ಜೀವಮಾನ ಸಾಧನೆ ಪ್ರಶಸ್ತಿ 2024, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ 2024, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ 2024, ಗುರಿ ಒಲಂಪಿಕ್ ಪದಕ 2025-26, ನಗದು ಪುರಸ್ಕಾರ 2023 ಮತ್ತು 2024 ಶೈಕ್ಷಣಿಕ ಶುಲ್ಕ ಮರು ಪಾವತಿ 2025-26, ಕ್ರೀಡಾ ವಿದ್ಯಾರ್ಥಿ ವೇತನ 2025-26ರ ಕ್ರೀಡೆಗಳಿಗೆ ವೆಬ್‌ಸೈಟ್ ವಿಳಾಸ: https://sevasindhuservices.karnataka.gov.in ರ ಮೂಲಕ ಅಂತಿಮ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಜಿಲ್ಲಾ ಕ್ರೀಡಾಂಗಣ ರಾಯಚೂರು ಇವರನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande