ಕೊಪ್ಪಳ : ರವಿವಾರ ಟಿಇಟಿ ಪರೀಕ್ಷೆ ; ನಿಷೇಧಾಜ್ಞೆ ಜಾರಿ
ಕೊಪ್ಪಳ, 05 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ರವಿವಾರ ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿದ್ದು, ಸುಗಮ ಮತ್ತು ಶಾಂತಿಯುತವಾಗಿ ಪರೀಕ್ಷೆ ನಡೆಯುವ ಉದ್ದೇಶದಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜ
ಕೊಪ್ಪಳ : ರವಿವಾರ ಟಿಇಟಿ ಪರೀಕ್ಷೆ ; ನಿಷೇಧಾಜ್ಞೆ ಜಾರಿ


ಕೊಪ್ಪಳ, 05 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ರವಿವಾರ ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿದ್ದು, ಸುಗಮ ಮತ್ತು ಶಾಂತಿಯುತವಾಗಿ ಪರೀಕ್ಷೆ ನಡೆಯುವ ಉದ್ದೇಶದಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ರವಿವಾರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 4.30 ಗಂಟೆಯವರೆಗೆ ಕೊಪ್ಪಳ ಮತ್ತು ಗಂಗಾವತಿ ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 37 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಿಷೇಧಾಜ್ಞೆ ಆದೇಶದನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಜರಾಕ್ಸ್, ಟೈಪಿಂಗ್ ಸೆಂಟರ್‌ಗಳನ್ನು ನಿಷೇಧಿಸಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರವನ್ನು ಹೊಂದಿದ ಅಭ್ಯರ್ಥಿಗಳು, ನಿಯೋಜಿತ ಶಿಕ್ಷಕರು ಹಾಗೂ ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ.

ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಲೂ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande