ವಿಶೇಷ ಘಟಕ ಯೋಜನೆಯ ಅನುದಾನ ಲ್ಯಾಪ್ಸ್ ಆಗದಂತೆ ನಿಗದಿತ ಅವಧಿಯಲ್ಲಿ ಕ್ರಮ ವಹಿಸಿ : ಸುನೀಲ್ ಉಕ್ಕಲಿ
ವಿಜಯಪುರ, 05 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿಶೇಷ ಘಟಕ ಯೋಜನೆ ಅನುದಾನ ಲ್ಯಾಪ್ಸ್ ಆಗದಂತೆ ನಿಗದಿತ ಅವಧಿಯಲ್ಲಿ ಕ್ರಿಯಾಯೋಜನೆಯನ್ವಯ ಕ್ರಮವಹಿಸಿ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯರಾದ ಸುನೀಲ ಉಕ್ಕಲಿ ಅವರು ಹೇಳಿದರು. ನಗರದ ನೂತನ ಪ್ರವಾಸಿ ಮಂ
ಸಭರ


ವಿಜಯಪುರ, 05 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವಿಶೇಷ ಘಟಕ ಯೋಜನೆ ಅನುದಾನ ಲ್ಯಾಪ್ಸ್ ಆಗದಂತೆ ನಿಗದಿತ ಅವಧಿಯಲ್ಲಿ ಕ್ರಿಯಾಯೋಜನೆಯನ್ವಯ ಕ್ರಮವಹಿಸಿ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯರಾದ ಸುನೀಲ ಉಕ್ಕಲಿ ಅವರು ಹೇಳಿದರು.

ನಗರದ ನೂತನ ಪ್ರವಾಸಿ ಮಂದಿರದ ಸಭಾ ಭವನದಲ್ಲಿ ವಿಶೇಷ ಘಟಕ ಯೋಜನೆಗೆ ಒಳಪಡುವ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ಮತನಾಡಿದರ ಅವರು, 2025-26ನೇ ಸಾಲಿನ ವಿಶೇಷ ಘಟಕ ಯೋಜನೆಗೆ ಸಂಬ0ಧಿಸಿದ ಪ್ರಗತಿ ಮಾಹಿತಿಯನ್ನು ಪಡೆದುಕೊಂಡ ಅವರು, ಕೃಷಿ ಇಲಾಖೆ, ಕೈಗಾರಿಕೆ ಇಲಾಖೆ, ಹೆಸ್ಕಾಂ, ಕಾರ್ಮಿಕ ಇಲಾಖೆ, ಆಯುಷ್ ಇಲಾಖೆ, ಕೈಮಗ್ಗ ಮತ್ತು ಜವಳಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.

ಫಲಾನುಭವಿಗಳ ಯೋಜನೆವಾರು ಮಾಹಿತಿ ಪರಿಶೀಲಿಸಿ, ನಿಗದಿಪಡಿಸಿರುವ ಭೌತಿಕ ಹಾಗೂ ಆರ್ಥಿಕ ಪ್ರಗತಿ ಸಾಧಿಸಬೇಕು. ಯೋಜನೆಯನ್ನು ನೈಜ ಫಲಾನುಭವಿಗಳಿಗೆ ತಲುಪಿಸಿ, ಅನುದಾನ ಲ್ಯಾಪ್ಸ್ ಆಗದಂತೆ ನೋಡಿಕೊಳ್ಳಬೇಕು. ಸರ್ಕಾರದ ಆಶಯಕ್ಕೆ ಪೂರಕವಾಗಿ ಕ್ರಮ ವಹಿಸಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ದೊರಕಿಸಿಕೊಡಬೇಕು ಎಂದು ಹೇಳಿದರು.

ಎಲ್ಲಾ ಇಲಾಖೆಗೆ ಬಿಡುಗಡೆಯಾಗುವ ಅನುದಾನವನ್ನು ನಿಗಧಿತ ಅವಧಿಯಲ್ಲಿ ಸಂಪೂರ್ಣವಾಗಿ ಹಾಗೂ ಸಮರ್ಪಕವಾಗಿ ಅನುದಾನ ಬಳಸಿ ವರದಿ ಸಲ್ಲಿಸಲು ಸೂಚಿಸಿದರು. ನಿಗಧಿತ ಅವಧಿಯಲ್ಲಿ ಯೋಜನೆಯನ್ವಯ ಪೂರ್ಣ ಪ್ರಮಾಣದ ಅನುದಾನ ಬಳಸಲು ವಿಫಲರಾದಲ್ಲಿ ಸಂಬ0ಧಿಸಿದ ಅಧಿಕಾರಿಗಳ ವಿರುದ್ಧ ಆಯೋಗದಿಂದ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ವಿಜಯಪುರ ಮಹಾನಗರ ಪಾಲಿಕೆ ಕಚೇರಿಗೆ ಭೇಟಿ ನೀಡಿ, 2025-26ನೇ ಸಾಲಿನ ವಿಶೇಷ ಘಟಕ ಯೋಜನೆಗೆ ಸಂಬ0ದಿಸಿದ ಪ್ರಗತಿ ಮಾಹಿತಿಯನ್ನು ಮಹಾನಗರ ಪಾಲಿಕೆ ಆಯುಕ್ತರಿಂದ ಪಡೆದುಕೊಂಡರು. ಫಲಾನುಭವಿಗಳ ಯೋಜನೆವಾರು ಮಾಹಿತಿ ಪರಿಶೀಲಿಸಿ, ನಿಗದಿಪಡಿಸಿರುವ ಭೌತಿಕ ಹಾಗೂ ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಾಲಿಕೆಯ ಉಪ ಆಯುಕ್ತರಾದ ಮಹಾವೀರ ಬೋರಣ್ಣವರ, ಪಾಲಿಕೆ ಆರೋಗ್ಯಾಧಿಕಾರಿಗಳಾದ ಎಸ್ ಎಲ್ ಲಕ್ಕಣ್ಣವರ, ಸಮಾಜ ಕಲ್ಯಾಣ ಇಲಾಖೆಯ ಅಧಿಕ್ಷಕರಾದ ಅರವಿಂದ ಲಂಬು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಜಿ.ಇಂಡಿ, ಸಮಾಜ ಕಲ್ಯಾಣ ಇಲಾಖೆಯ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande