ಕೇಂದ್ರ ಸಚಿವ ಶಿವರಾಜ್ ಚೌಹಾಣ್ ಗ್ವಾಲಿಯರ್, ಭಿಂದ್ ಭೇಟಿ
ಭೋಪಾಲ್, 05 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಇಂದು ಮಧ್ಯಪ್ರದೇಶದ ಗ್ವಾಲಿಯರ್ ಮತ್ತು ಭಿಂದ್ ಜಿಲ್ಲೆಗಳ ಏಕದಿನ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಮಧ್ಯಾಹ್ನ ಗ್ವಾಲಿಯರ್‌ಗೆ ಆಗಮಿಸುವ ಅವರು ಮೊದಲು ICAR–CPRI ಆಲೂಗಡ್ಡೆ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀ
Chwan tour


ಭೋಪಾಲ್, 05 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಇಂದು ಮಧ್ಯಪ್ರದೇಶದ ಗ್ವಾಲಿಯರ್ ಮತ್ತು ಭಿಂದ್ ಜಿಲ್ಲೆಗಳ ಏಕದಿನ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಮಧ್ಯಾಹ್ನ ಗ್ವಾಲಿಯರ್‌ಗೆ ಆಗಮಿಸುವ ಅವರು ಮೊದಲು ICAR–CPRI ಆಲೂಗಡ್ಡೆ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ವಿಜ್ಞಾನಿಗಳೊಂದಿಗೆ ಉತ್ಪಾದನೆ, ಸುಧಾರಿತ ಪ್ರಭೇದಗಳು ಹಾಗೂ ತಂತ್ರಜ್ಞಾನಗಳ ಕುರಿತು ಚರ್ಚಿಸಲಿದ್ದಾರೆ.

ನಂತರ ಭಿಂದ್‌ನಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರೈತರು ಮತ್ತು ಸ್ಥಳೀಯ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಸಂಜೆ ಗ್ವಾಲಿಯರ್‌ಗೆ ಹಿಂತಿರುಗುವ ಸಚಿವರು ರಾತ್ರಿ 8 ಗಂಟೆಗೆ ರೈಲಿನಲ್ಲಿ ಭೋಪಾಲಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande