
ಬಳ್ಳಾರಿ, 05 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಾಳೆ ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್‍ನ ನಜೀರ್ ಸಾಬ್ ಸಭಾಂಗಣದಲ್ಲಿ ದೇವದಾಸಿ ಮಹಿಳೆಯರಿಗೆ ಮತ್ತು ವಿಕಲಚೇತನರಿಗೆ ಸರ್ಕಾರಿ ಸೌಲಭ್ಯಗಳ ಕುರಿತು ಕಾನೂನು ಅರಿವು ಕಾರ್ಯಗಾರ ಏರ್ಪಡಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಜಿ.ಶಾಂತಿ ಅವರು ಕಾರ್ಯಗಾರ ಉದ್ಘಾಟಿಸುವರು.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ, ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ ಎಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಸವಿತಾ.ಸಿ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು ಹಾಗೂ ಯೋಜನಾಧಿಕಾರಿ ಸುಧಾ.ಎಂ.ಚಿದ್ರಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಇತರರು ಉಪಸ್ಥಿತರಿರುವರು ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್