
ಕೊಪ್ಪಳ, 05 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕೃಷಿ ಇಲಾಖೆ ವತಿಯಿಂದ ಯಲಬುರ್ಗಾ ತಾಲೂಕಿನ ಮುಧೋಳ ಗ್ರಾಮದ ಶ್ರೀ ತ್ರಿಲಿಂಗೇಶ್ವರ ಪ್ರೌಢ ಶಾಲೆಯ ಆವರಣದಲ್ಲಿ ಶುಕ್ರವಾರದಂದು ಜಲಾನಯನ ಉತ್ಸವ ಹಾಗೂ ವಿಶ್ವ ಮಣ್ಣು ದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಕೊಪ್ಪಳ ಕೃಷಿ ವಿಸ್ತರಣಾ ಕೇಂದ್ರದ ಕೃಷಿ ವಿಜ್ಞಾನಿ ಡಾ.ಎಂ. ವಿ ರವಿ ಮಾತನಾಡಿ, ಮಣ್ಣು ಹಾಗೂ ನೀರು ಸಂರಕ್ಷಣೆಯು ಹಿಂದಿಗಿ0ತಲೂ ಈಗ ಹೆಚ್ಚು ಪ್ರಸ್ತುತವಾಗಿದೆ ಎಂದರು.
ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಾದ ಜಿ. ಡಿ. ಕೃಷ್ಣಮೂರ್ತಿ ಮಾತನಾಡಿ, ಸಾಂಪ್ರದಾಯಿಕ ಸಾವಯವ ಕೃಷಿಯಿಂದ ಮಾತ್ರವೇ ಮಣ್ಣಿನ ಜೀವಂತಿಕೆಯನ್ನು ಉಳಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.
ಯಲಬುರ್ಗಾ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗ ಬಬಲಾದ ಮಾತನಾಡಿ, ಆಹಾರ ಭದ್ರತೆಯ ಇಂದಿನ ಅನಿವಾರ್ಯತೆಯ ಜೊತೆ ಜೊತೆಗೆ ಮಣ್ಣು ಮತ್ತು ನೀರಿನ ಸದ್ಬಳಕೆಯೂ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ್‌ನ ಒಂಬುಡ್ಸಪರ್ಸನ್ ವೀರಣ್ಣ ಕಮತರ ಮಾತನಾಡಿ, ಇಂದಿನ ನಗರಗಳ ಆಹಾರ ಮತ್ತು ಆರೋಗ್ಯವು ಹಳ್ಳಿಯ ಮಣ್ಣಿನ ಸಂರಕ್ಷಣೆಯಲ್ಲಿಯೇ ಅಡಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷರಾದ ಮಮತಾಜ್ ಬಿ. ಹುಸೇನ್‌ಸಾಬ್ ಹಿರೇಮನಿ, ಉಪ ಕೃಷಿ ನಿರ್ದೇಶಕ ಸಿದ್ದೇಶ್ವರ ಎಲ್., ಯಲಬುರ್ಗಾ ಸಹಾಯಕ ಕೃಷಿ ನಿರ್ದೇಶಕ ಪ್ರಮೋದ ತುಂಬಳ ಹಾಗೂ ಗ್ರಾಮದ ಹಿರಿಯರು, ಮುಖಂಡರು ಹಾಗೂ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್