ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ
ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ
ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಮುಖಂಡರು ಪುಷ್ಪನಮನ ಸಲ್ಲಿಸಿದರು.


ಕೋಲಾರ, ೦೬ ಡಿಸೆಂಬರ್ (ಹಿ.ಸ) :

ಆ್ಯಂಕರ್ : ಅಂಬೇಡ್ಕರ್ ಸಮಾಜದ ಎಲ್ಲಾ ಶೋಷಿತರ ಆಶಾಕಿರಣವಾಗಿದ್ದು, ಅವರು ನೀಡಿರುವ ವಿಶ್ವಶ್ರೇಷ್ಠವಾದ ನಮ್ಮ ಸಂವಿಧಾನ ಅಸಮಾನತೆ ತೊಡೆದು ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಇಡೀ ವಿಶ್ವದಲ್ಲೇ ನಮ್ಮದು ಶ್ರೇಷ್ಟವಾದ ಸಂವಿಧಾನವಾಗಿದ್ದು, ಬೃಹತ್ ಪ್ರಜಾಪ್ರಭುತ್ವ ರಾಷ್ಟçವೊಂದರ ಸಂವಿಧಾನ ರಚಿಸಿ ಜನಮಾನಸದಲ್ಲಿ ಅಂಬೇಡ್ಕರ್ ವಿರಾಜಮಾನರಾಗಿದ್ದಾರೆ. ಅವರ ಆದರ್ಶ ಪಾಲಿಸೋಣ, ಅವರ ಹಾದಿಯಲ್ಲಿ ಸಾಗುವ ಮೂಲಕ ಸಮಾಜದಲ್ಲಿನ ಅಸಮಾನತೆ ತೊಡೆದುಹಾಕಲು ಸಂಕಲ್ಪ ಮಾಡೋಣ ಎಂದರು.

ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ಅಂಬರೀಷ್ ಮಾತನಾಡಿ, ಸಂವಿಧಾನದ ಮಹತ್ವ ಪ್ರತಿಯೊಬ್ಬರ ಬದುಕಿನ ಪ್ರತಿ ಆಚರಣೆಯಲ್ಲೂ ಪ್ರತಿಫಲಿಸುವಂತಾದರೆ ದೇಶದ ಪ್ರಗತಿ ಸಾಧ್ಯವೆಂದು ಹೇಳಿದ ಅವರು, ಅಂಬೇಡ್ಕರ್ ಗತಿಸಿ ೬೭ ವರ್ಷಗಳ ನಂತರವೂ ಅವರನ್ನು ದೇಶ ಮಾತ್ರವಲ್ಲದೆ ವಿಶ್ವವ್ಯಾಪಿ ಸ್ಮರಿಸಿಕೊಳ್ಳಲಾಗುತ್ತಿದೆ, ಜೀವಮಾನವಿಡಿ ದೇವರ ಅಸ್ತಿತ್ವನ್ನೇ ನಂಬದ ಅಂಬೇಡ್ಕರ್ ಕೋಟ್ಯಾಂತರ ಜನರ ಬದುಕಿಗೆ ದೇವರಾಗಿರುವುದು ಅವರ ಬದುಕಿನ ಶ್ರೇಷ್ಟತೆಯ ಸಂಕೇತವಾಗಿದೆಯೆAದರು.

ಕಾರ್ಯಕ್ರಮದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಲಕ್ಷಿö್ಮದೇವಮ್ಮ, ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸೀತಿಹೊಸೂರು ಮುರಳಿಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಸೈಯದ್ ಅಪ್ಸರ್, ರಾಮಯ್ಯ, ಮುನಿವೆಂಕಟಪ್ಪ,ಮAಜುಳಾ,ಲಾಲ್ ಬಹುದ್ದೂರು ಶಾಸ್ತಿç ಮತ್ತಿತರರಿದ್ದರು.

ಚಿತ್ರ -ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಮುಖಂಡರು ಪುಷ್ಪನಮನ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande