
ನವದೆಹಲಿ, 06 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ದೂರದೃಷ್ಟಿಯ ನಾಯಕತ್ವ ಮತ್ತು ನ್ಯಾಯ, ಸಮಾನತೆ ಮತ್ತು ಸಾಂವಿಧಾನಿಕತೆಗೆ ಅಚಲವಾದ ಬದ್ಧತೆ ನಮ್ಮ ರಾಷ್ಟ್ರೀಯ ಪ್ರಯಾಣಕ್ಕೆ ಮಾರ್ಗದರ್ಶನ ನೀಡುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಮಾನವ ಘನತೆಯನ್ನು ಎತ್ತಿಹಿಡಿಯಲು ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸಲು ಅವರು ಪೀಳಿಗೆಗೆ ಸ್ಫೂರ್ತಿ ನೀಡಿದ್ದಾರೆ. ವಿಕ್ಷಿತ ಭಾರತ ನಿರ್ಮಾಣದತ್ತ ನಾವು ಕೆಲಸ ಮಾಡುವಾಗ ಅವರ ಆದರ್ಶಗಳು ನಮ್ಮ ಹಾದಿಯನ್ನು ಬೆಳಗಿಸುತ್ತಿರಲಿ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa