
ಬೆಂಗಳೂರು, 06 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನದಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಮನ ಸಲ್ಲಿಸಿದ್ದಾರೆ.
ಹುಟ್ಟಿನಿಂದಲೇ ಜಾತಿಯ ಕಾರಣಕ್ಕಾಗಿ ತಾವು ಎದುರಿಸಿದ ನೋವು, ಅವಮಾನ, ನಿಂದನೆಯನ್ನು ಸವಾಲಾಗಿ ಸ್ವೀಕರಿಸಿ, ಮುಂದೆ ತನ್ನಂತಹ ಕೋಟ್ಯಂತರ ಅವಕಾಶ ವಂಚಿತ ಜನರಿಗೆ ಸ್ವಾತಂತ್ರ್ಯ, ಸಮಾನತೆ, ಘನತೆಯ ಬದುಕನ್ನು ಕಲ್ಪಿಸಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬದುಕಿನ ಹಾದಿ ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕ ಎಂದು ಮುಖ್ಯಮಂತ್ರಿ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa