
ಹೊಸಪೇಟೆ, 06 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಹೊಸಪೇಟೆ ತಾಲೂಕಿನ ಸೀತಾರಾಮ ತಾಂಡ ಗ್ರಾಮ ಪಂಚಾಯಿತಿಯ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ನಿಷ್ಪಕ್ಷ, ನ್ಯಾಯ ಸಮ್ಮತ, ಅಕ್ರಮ ಹಾಗೂ ಚುನಾವಣಾ ಭ್ರμÁ್ಟಚಾರಗಳನ್ನು ತಡೆಯುವ ನಿಟ್ಟಿನಲ್ಲಿ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಮತ್ತು ತಂಡವನ್ನು ನೇಮಕ ಮಾಡಿ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿಗಳಾದ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.
ಹಡಗಲಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ.ಆಲಂ ಬಾμÁ ಅವರನ್ನು ನೀತಿ ಸಂಹಿತೆ ನೋಡಲ್ ಅಧಿಕಾರಿಯಾಗಿ ಹಾಗೂ ಸೀತಾರಾಮ ತಾಂಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ನಾಯ್ಕ ಮತ್ತು ಕಮಲಾಪುರ ಗ್ರಾಮ ಆಡಳಿತ ಅಧಿಕಾರಿ ಗಂಗಾಧರ ಇವರನ್ನು ಅಧೀನ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.
ನೇಮಕ ಮಾಡಲಾದ ಆಧಿಕಾರಿ ಮತ್ತು ಸಿಬ್ಬಂದಿಗಳು ಚುನಾವಣೆ ಆಯೋಗ ಆದೇಶದಂತೆ ನ್ಯಾಯಸಮ್ಮತ ಮತ್ತು ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಆದೇಶಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್