ಡಾ. ಬಿ.ಆರ್.ಅಂಬೇಡ್ಕರ ರವರ 69 ನೇ ಮಹಾಪರಿನಿರ್ವಾಣದ ಪೂಜಾ ಕಾರ್ಯಕ್ರಮ
ಗದಗ, 06 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ ಅವರ 69 ನೇ ಮಹಾ ಪರಿನಿರ್ವಾಣದ ಪೂಜಾ ಕಾರ್ಯಕ್ರಮವು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಜರುಗಿತು. ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗ
ಫೋಟೋ


ಗದಗ, 06 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ ಅವರ 69 ನೇ ಮಹಾ ಪರಿನಿರ್ವಾಣದ ಪೂಜಾ ಕಾರ್ಯಕ್ರಮವು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಜರುಗಿತು. ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿ.ಪಂ. ಮುಖ್ಯ ಯೋಜನಾಧಿಕಾರಿ ಎ.ಎ.ಕಂಬಾಳಿಮಠ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ನಂದಾ ಹಣಬರಟ್ಟಿ, ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ.ಎಚ್.ಬಿ.ಹುಲಗಣ್ಣವರ, ಉಪವಿಭಾಗಾಧಿಕಾರಿಗಳ ಕಚೇರಿಯ ತಹಶೀಲ್ದಾರ ಜಯಶ್ರೀ ವಸ್ತçದ, ವಯಸ್ಕರ ಶಿಕ್ಷಣಾಧಿಕಾರಿ ಶಿವಕುಮಾರ ಕುರಿಯವರ, ಡಯಟ್ ಪ್ರಾಚಾರ್ಯ ಜಿ.ಎಂ.ಮುಂದಿನಮನಿ, ಸಂಘ ಸಂಸ್ಥೆಯ ಪದಾಧಿಕಾರಿಗಳು, ಗಣ್ಯರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande