ಡಿ.೧೦ ಕೋಲಾರ ತಾಲ್ಲೂಕುಮಟ್ಟದ ಶಿಕ್ಷಕರ ಸಹಪಠ್ಯಚಟುವಟಿಕೆಗಳ ಸ್ಪರ್ಧೆ
ಡಿ.೧೦ ಕೋಲಾರ ತಾಲ್ಲೂಕುಮಟ್ಟದ ಶಿಕ್ಷಕರ ಸಹಪಠ್ಯಚಟುವಟಿಕೆಗಳ ಸ್ಪರ್ಧೆ
ಡಿ.೧೦ ಕೋಲಾರ ತಾಲ್ಲೂಕುಮಟ್ಟದ ಶಿಕ್ಷಕರ ಸಹಪಠ್ಯಚಟುವಟಿಕೆಗಳ ಸ್ಪರ್ಧೆ


ಕೋಲಾರ, ೦೬ ಡಿಸೆಂಬರ್ (ಹಿ.ಸ) :

ಆ್ಯಂಕರ್ : ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯಿಂದ ೨೦೨೫-೨೬ನೇ ಸಾಲಿನ ತಾಲ್ಲೂಕುಮಟ್ಟದ ಪ್ರಾಥಮಿಕ,ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ಸಹಪಠ್ಯಚಟುವಟಿಕೆಗಳ ಸ್ಪರ್ಧೆಗಳನ್ನು ಡಿ.೧೦ರಂದು ಬುಧವಾರ ಬೆಳಗ್ಗೆ ೧೦ ಗಂಟೆಗೆ ನಗರದ ಮೆಥೋಡಿಸ್ಟ್ ಶಾಲಾ ಆವರನದಲ್ಲಿ ಆಯೋಜಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಧುಮಾಲತಿ ಪಡುವಣೆ ತಿಳಿಸಿದ್ದಾರೆ.

ಶಿಕ್ಷಕರಿಗೆ ಭಕ್ತಿಗೀತೆ, ಆಶುಭಾಷಣ, ಪ್ರಬಂಧ, ಸ್ಥಳದಲ್ಲೇ ಚಿತ್ರ ಬರೆಯುವುದು, ಸ್ಥಳದಲ್ಲೇ ಪಾಠೋಪಕರಣ ತಯಾರಿಕೆ, ರಸಪ್ರಶ್ನೆ ಸ್ಪರ್ಧೆ ಸಾಮಾನ್ಯ ಜ್ಞಾನ, ರಸಪ್ರಶ್ನೆ ವಿಜ್ಞಾನ ಈ ಏಳು ರೀತಿಯ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಸ್ಪರ್ಧೆಗಳಲ್ಲಿ ತಾಲ್ಲೂಕಿನ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಶಿಕ್ಷಕರು ಭಾಗವಹಿಸಬಹುದಾಗಿದ್ದು, ಒಬ್ಬ ಶಿಕ್ಷಕರು ಒಂದು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅರ್ಹರಾಗಿರುತ್ತಾರೆ ಮತ್ತು ಪ್ರಥಮ ಸ್ಥಾನ ಪಡೆದವರು ಜಿಲ್ಲಾ ಹಂತಕ್ಕೆ ಅರ್ಹರಾಗಿರುತ್ತಾರೆ. ರಾಜ್ಯಮಟ್ಟದ ಸಹಪಠ್ಯ ಸ್ಪರ್ಧೆಗಳಲ್ಲಿ ಒಂದು ಬಾರಿಯಾದರೂ ಸ್ಥಾನ ಗಳಿಸಿದ್ದಲ್ಲಿ ಅಂತಹ ಶಿಕ್ಷಕರು ಪುನ: ಅದೇ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ ಎಂದು ತಿಳಿಸಿರುವ ಅವರು, ವಿಜೇತ ಶಿಕ್ಷಕರಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಪುರಸ್ಕಾರವಿರುತ್ತದೆ. ಹೆಚ್ಚಿನ ಮಾಹಿತಿಗೆ ಶಿಕ್ಷಣ ಸಂಯೋಜಕರಾದ ಮುನಿರತ್ನಯ್ಯಶೆಟ್ಟಿ ಅವರನ್ನು ಸಂಪರ್ಕಿಸಲು ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande