ಮೀನುಗಾರಿಕೆ ಇಲಾಖೆಯಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಹೊಸಪೇಟೆ, 06 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮೀನುಗಾರಿಕೆ ಇಲಾಖೆಯ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಆಭಾ ಜನ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ ಫಲಾನುಭವಿಗಳ ಆಧಾರಿತ ಕಾರ್ಯಕ್ರಮದ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಹೊಸಪೇಟೆ ಮತ್ತು ಕೂಡ್ಲಿಗಿ
ಮೀನುಗಾರಿಕೆ ಇಲಾಖೆಯಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ


ಹೊಸಪೇಟೆ, 06 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮೀನುಗಾರಿಕೆ ಇಲಾಖೆಯ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಆಭಾ ಜನ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ ಫಲಾನುಭವಿಗಳ ಆಧಾರಿತ ಕಾರ್ಯಕ್ರಮದ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಹೊಸಪೇಟೆ ಮತ್ತು ಕೂಡ್ಲಿಗಿ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಮೀನು ಮಾರಾಟಕ್ಕಾಗಿ ಐಸ್ ಬಾಕ್ಸ್ ನೊಂದಿಗೆ ದ್ವಿಚಕ್ರ ವಾಹನ, ಐಸ್ ಬಾಕ್ಸ್ ನೊಂದಿಗೆ ತ್ರಿಚಕ್ರವಾಹನ ಮತ್ತು ಜೀವಂತ ಮೀನು ಮಾರಾಟ ಕೇಂದ್ರಗಳನ್ನು ಘಟಕ ವೆಚ್ಚದಂತೆ ಸ್ಥಾಪಿಸಲು ಬುಡಕಟ್ಟು ಸಮುದಾಯದ ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ.90 ಸಹಾಯಧನವನ್ನು ನೀಡಲಾಗುತ್ತದೆ.

ಹೊಸಪೇಟೆ ತಾಲೂಕಿನ ಚಿಲಕನಹಟ್ಟಿ, ಹೊಸೂರು, ಮತ್ತು ನರಸಪುರ ಗ್ರಾಮದ ಬುಡಕಟ್ಟು ಸಮುದಾಯದ ಪರಿಶಿಷ್ಟ ಪಂಗಡ ಅರ್ಹ ಫಲಾನುಭವಿಗಳು ಹಾಗೂ ಕೂಡ್ಲಿಗಿ ತಾಲೂಕಿನ ಅಡವಿ ಸೂರನಹಳ್ಳಿ, ಸಿಡೇಗಲ್ಲು, ನರಸಿಂಹಗಿರಿ, ಹುಲಿಕುಂಟಾ, ಯರಲಿಂಗನಹಳ್ಳಿ, ಗಂಡಬೊಮ್ಮನಹಳ್ಳಿ, ಹರವದಿ, ಹುರಡಹಳ್ಳಿ ಚಿರತಗಂಡು, ಮೀನಾಕೆರೆ, ಕುಮತಿ, ಪಾಲಯ್ಯನಕೊಟೆ, ಸೂಲದಹಳ್ಳಿ, ಜುಮೋಬನಹಳ್ಳಿ, ತಿಪ್ಪೆಹಳ್ಳಿ ಗ್ರಾಮಗಳು ಸೇರಿದಂತೆ ಕೊಟ್ಟೂರು ತಾಲೂಕಿನ ನಾಗೇನಹಳ್ಳಿ ಗ್ರಾಮ ಹಾಗೂ ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣದೇವನಕೆರೆ ಗ್ರಾಮದ ಬುಡಕಟ್ಟು ಸಮುದಾಯದ, ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿ.15 ರಂದು ಕೊನೆಯ ದಿನವಾಗಿದ್ದು, ಅವಧಿ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಅರ್ಜಿಗಳನ್ನು ಹೊಸಪೇಟೆ ಮತ್ತು ಕೂಡ್ಲಿಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆ ಕಚೇರಿ ಅಧಿಕಾರಿ ಜಿ.ಶಾಂತ್‍ಕುಮಾರ್ ಮೊ.9620177588, ಕೂಡ್ಲಿಗಿ ಕಚೇರಿ ಅಧಿಕಾರಿ ವಿ.ರಜನೀಶ್ ದೇಸಾಯಿ ಮೊ.7349711866 ಸಂಖ್ಯೆಗಳಿಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande