ಜಾಗತಿಕ ಮಟ್ಟದಲ್ಲಿ ಭಾರತದ ಜವಳಿ ರಫ್ತು ಏರಿಕೆ
ನವದೆಹಲಿ, 06 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಭಾರತದ ಸ್ವದೇಶಿ ಜವಳಿ ಉತ್ಪನ್ನಗಳು ಜಾಗತಿಕ ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದ ಬೇಡಿಕೆಯನ್ನು ಗಳಿಸುತ್ತಿದೆ ಎಂದು ಕೇಂದ್ರ ಜವಳಿ ಖಾತೆ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ. ಈ ಕುರಿತು ಎಕ್ಸ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, 202
Textile


ನವದೆಹಲಿ, 06 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಭಾರತದ ಸ್ವದೇಶಿ ಜವಳಿ ಉತ್ಪನ್ನಗಳು ಜಾಗತಿಕ ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದ ಬೇಡಿಕೆಯನ್ನು ಗಳಿಸುತ್ತಿದೆ ಎಂದು ಕೇಂದ್ರ ಜವಳಿ ಖಾತೆ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ.

ಈ ಕುರಿತು ಎಕ್ಸ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, 2025ರ ಏಪ್ರಿಲ್‌–ಸೆಪ್ಟೆಂಬರ್ ಅವಧಿಯಲ್ಲಿ ದೇಶವು 8.48 ಬಿಲಿಯನ್ ಯುಎಸ್ ಡಾಲರ್ ಮೌಲ್ಯದ ಜವಳಿ ರಫ್ತನ್ನು ದಾಖಲಿಸಿದೆ. ಭಾರತದ ಬಟ್ಟೆ 111 ರಾಷ್ಟ್ರಗಳಿಗೆ ತಲುಪುತ್ತಿರುವುದು ಕ್ಷೇತ್ರದ ವಿಸ್ತಾರಕ್ಕೆ ಪ್ರಮುಖ ಸೂಚಕವಾಗಿದೆ ಎಂದಿದ್ದಾರೆ.

ಜಗತ್ತು ಭಾರತೀಯ ಸ್ವದೇಶಿ ಬಟ್ಟೆಗಳನ್ನು ಆಯ್ಕೆ ಮಾಡುತ್ತಿದೆ ಇದು ಭಾರತದ ಜವಳಿ ಕ್ಷೇತ್ರಕ್ಕೆ ಹೆಮ್ಮೆಯ ಕ್ಷಣ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande