
ಬೆಂಗಳೂರು, 06 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ನೋಟಿಸ್ ಜಾರಿಗೊಳಿಸಿದೆ. ಈ ಕುರಿತು ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳವಣಿಗೆಯನ್ನು “ರಾಜಕೀಯ ಕಿರುಕುಳದ ಯತ್ನ” ಎಂದು ಖಂಡಿಸಿದರು.
ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳು ಕಾಂಗ್ರೆಸ್ ಪಕ್ಷದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿವೆ. “ಪಕ್ಷ ಸಂಕಷ್ಟದಲ್ಲಿದ್ದ ಸಮಯದಲ್ಲಿ ನಾವು ಕಾಂಗ್ರೆಸ್ಸಿಗರು ಟ್ರಸ್ಟ್‌ಗಳ ಮುಖಾಂತರ ಆ ಸಂಸ್ಥೆಗಳಿಗೆ ಸಹಾಯ ಮಾಡಿದ್ದೇವೆ. ಇದರಲ್ಲಿ ಯಾವುದೇ ಅಕ್ರಮವಿಲ್ಲ,” ಎಂದು ಅವರು ಸ್ಪಷ್ಟಪಡಿಸಿದರು.
ಈ ಹಿಂದೆ ಬಂದಿದ್ದ ನೋಟಿಸ್‌ಗೆ ಅಗತ್ಯ ಮಾಹಿತಿಗಳು ಹಾಗೂ ಉತ್ತರಗಳನ್ನು ಈಗಾಗಲೇ ಸಲ್ಲಿಸಿರುವುದಾಗಿ, ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಹ ಸಲ್ಲಿಕೆಯಾಗಿದೆ ಎಂದು ಅವರು ತಿಳಿಸಿದರು.
ಇದೇ ವೇಳೆ, ದೆಹಲಿ ಪೊಲೀಸರು ಈ ತಿಂಗಳ 19ರ ಒಳಗೆ ಹಾಜರಾಗಿ ಮಾಹಿತಿ ನೀಡಲು ಸೂಚಿಸಿದ್ದಾರೆ, ಇದನ್ನು ಕಾನೂನಾತ್ಮಕವಾಗಿ ಪರಿಶೀಲಿಸಲಾಗುತ್ತದೆ, ಎಂದು ಹೇಳಿದರು.
ಇದು ಕಿರುಕುಳ ನೀಡುವ ಪ್ರಯತ್ನವಾಗಿದ್ದು,ಇದು ಸರಿಯಲ್ಲ ಎಂದು ಡಿ.ಕೆ. ಶಿವಕುಮಾರ್ ಖಂಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa