
ಗದಗ, 06 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಯ ಪ್ರೌಢಶಾಲಾ ವಿಭಾಗದ ಭಕ್ತಿಗೀತೆ ಸ್ಪರ್ಧೆಯಲ್ಲಿ ಡಂಬಳ ಜಗದ್ಗುರು ತೋಂಟಂದಾರ್ಯ ವಿದ್ಯಾಪೀಠದ ಬಾಲಕಿಯರ ಪ್ರೌಢಶಾಲೆಯ ಸಂಗೀತ ಶಿಕ್ಷಕ ಮೃತ್ಯುಂಜಯ ಎಚ್. ಹಿರೇಮಠ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮುಂಡರಗಿ ನಗರದ ವಿವೇಕಾನಂದ ಶಾಲೆಯಲ್ಲಿ ಜರುಗಿತು. ಶಿಕ್ಷಕರನ್ನು ಜ.ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿಗಳಾದ ಪ್ರೊ. ಶಿವಾನಂದ ಪಟ್ಟಣಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರು ಎಸ್.ಎನ್. ಕಲ್ಲಿಗನೂರ, ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP