
ಬೆಂಗಳೂರು, 06 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರದ ಪ್ರತಿ ಇಲಾಖೆಯಲ್ಲೂ ಅಕ್ರಮ, ಅವ್ಯವಹಾರ ತುಂಬಿ ತುಳುಕುತ್ತಿದೆ, ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಉಪ ಲೋಕಾಯುಕ್ತರ ಹೇಳಿದ್ದು ಅಕ್ಷರಶಃ ನಿಜ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರಕಾರದ ವಿರುದ್ದ ಹರಿಹಾಯ್ದಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸರ್ಕಾರಿ ಶಾಲೆಗಳಲ್ಲಿ ಖರೀದಿ ಮಾಡಿರುವ ಲ್ಯಾಪ್ಟಾಪ್, ಎಲ್ ಇಡಿ ಪ್ರೊಜೆಕ್ಟರ್, ಯುಪಿಎಸ್ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಕೆಟಿಟಿಪಿ ನಿಯಮ ಉಲ್ಲಂಘನೆ ಮಾಡಿ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆಸಿರುವ ಸತ್ಯಾಂಶ ಲೋಕಾಯುಕ್ತ ದಾಳಿಯಲ್ಲಿ ಪತ್ತೆಯಾಗಿದೆ.
ಆಲಿ ಬಾಬಾ 40 ಕಳ್ಳರ ಕಥೆ ಕೇಳಿದ್ದೆವು. ಈಗ ನಿಮ್ಮ ಭ್ರಷ್ಟ ಸಂಪುಟದಲ್ಲಿ ಸಿದ್ದರಾಮಯ್ಯ ಮತ್ತು 34 ಕಳ್ಳರು ಎನ್ನುವಂತಾಗಿದೆ.
ದಿನಕ್ಕೊಂದು ಹಗರಣ, ದಿನಕ್ಕೊಂದು ಅಕ್ರಮ, ದಿನಕ್ಕೊಂದು ಅವ್ಯವಹಾರ. ದಿನಬೆಳಗಾದರೆ ಪತ್ರಿಕೆಗಳಲ್ಲಿ ಈ ಸುದ್ದಿ ನೋಡಿ ನೋಡಿ ನಿಮ್ಮ ಕಾಂಗ್ರೆಸ್ ಸರ್ಕಾರದ ವಿರುದ್ಧ ಕರ್ನಾಟಕದ ಜನತೆ ರೋಸಿ ಹೋಗಿದ್ದಾರೆ. ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು ರಾಜನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa