ನಾಳೆಯಿಂದ ಕಂಪ್ಯೂಟರ್ ಡಿಟಿಪಿ ತರಬೇತಿ
ಚಿತ್ರದುರ್ಗ, 07 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ನಗರದ ರುಡ್‍ಸೆಟ್ ಸಂಸ್ಥೆಯಲ್ಲಿ ಗ್ರಾಮಿಣ ಭಾಗದ ಯುವಕ ಹಾಗೂ ಯುವತಿಯರಿಗಾಗಿ ಸ್ವ ಉದ್ಯೋಗ ಮಾಡಲು ಇದೇ ಡಿ.08 ರಿಂದ 45 ದಿನಗಳ ಕಾಲ ಕಂಪ್ಯೂಟರ್ ಡಿಟಿಪಿ ತರಬೇತಿ ಆಯೋಜಿಸಲಾಗಿದೆ. ಅಭ್ಯರ್ಥಿಗಳು 19 ರಿಂದ 45 ವರ್ಷಗಳ ವಯೋಮಿತಿಯೊಳಗಿರಬ
ನಾಳೆಯಿಂದ ಕಂಪ್ಯೂಟರ್ ಡಿಟಿಪಿ ತರಬೇತಿ


ಚಿತ್ರದುರ್ಗ, 07 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ನಗರದ ರುಡ್‍ಸೆಟ್ ಸಂಸ್ಥೆಯಲ್ಲಿ ಗ್ರಾಮಿಣ ಭಾಗದ ಯುವಕ ಹಾಗೂ ಯುವತಿಯರಿಗಾಗಿ ಸ್ವ ಉದ್ಯೋಗ ಮಾಡಲು ಇದೇ ಡಿ.08 ರಿಂದ 45 ದಿನಗಳ ಕಾಲ ಕಂಪ್ಯೂಟರ್ ಡಿಟಿಪಿ ತರಬೇತಿ ಆಯೋಜಿಸಲಾಗಿದೆ.

ಅಭ್ಯರ್ಥಿಗಳು 19 ರಿಂದ 45 ವರ್ಷಗಳ ವಯೋಮಿತಿಯೊಳಗಿರಬೇಕು. ಕನ್ನಡ ಓದಲು ಬರೆಯಲು ಬಲ್ಲವರಾಗಿರಬೇಕು. ಉದ್ಯೋಗವನ್ನು ಮಾಡಬೇಕೆಂಬ ಆಸಕ್ತಿ ಹೊಂದಿರಬೇಕು. ತರಬೇತಿಗೆ ಸಂಬಂಧಿಸಿದಂತೆ ಕೌಶಲ್ಯ ಕುರಿತು ಪ್ರಾಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಈ ತರಬೇತಿಯು ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಸ್ವ-ವಿಳಾಸದ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್ ಪ್ರತಿಗಳೊಂದಿಗೆ ಇದೇ ಡಿ.08ರಂದು ರುಡ್‍ಸೆಟ್ ಸಂಸ್ಥೆಯಲ್ಲಿ ನೇರವಾಗಿ ತರಬೇತಿಯಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಸ್ಥಯ ದೂರವಾಣಿ ಸಂಖ್ಯೆ 8618282445, 9481778047, 9019299901 ಹಾಗೂ 8660627785 ಗೆ ಕರೆ ಮಾಡುವಂತೆ ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande