
ಹಾಸನ, 07 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿದ್ಯಾರ್ಥಿವೇತನ ಯೋಜನೆಗಳಾದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ (1 ರಿಂದ 8ನೇ ತರಗತಿ), ಶುಲ್ಕ ಮರುಪಾವತಿ ಯೋಜನೆ ಐ.ಐ.ಟಿ ಐ.ಐ.ಎಂ ಉತ್ತೇಜನ ಯೋಜನೆ, ಪಿ.ಹೆಚ್.ಡಿ ಫೆಲೋಶಿಪ್ ಯೋಜನೆ, ಬಿ.ಎಸ್ಸಿ ನರ್ಸಿಂಗ್ & ಜಿ.ಎನ್.ಎಂ ನರ್ಸಿಂಗ್ ಹಾಗೂ ರಾಷ್ಟ್ರೀಯ, ವಿದೇಶಿ ವಿದ್ಯಾರ್ಥಿವೇತನ ಯೋಜನೆಗಳಡಿ ವಿದ್ಯಾರ್ಥಿವೇತನ ನೀಡಲು ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು 31-01-2026 ರವರೆಗೆ ವಿಸ್ತರಿಸಲಾಗಿದೆ.
2024-25ನೇ ಸಾಲಿನಲ್ಲಿ ಸಂಬಂಧಪಟ್ಟ ವಿಶ್ವವಿದ್ಯಾಲಯಗಳು ಸಕಾಲದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ವಿವರಗಳನ್ನು ಅಪ್‌ಡೇಟ್ ಮಾಡದೇ ಇರುವುದರಿಂದ 2024-25 ನೇ ಸಾಲಿನಲ್ಲಿ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಸಲ್ಲಿಸಲು ನಿಗಧಿಪಡಿಸಲಾಗಿದ್ದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ಸಾಧ್ಯವಾಗದ ವಿದ್ಯಾರ್ಥಿಗಳ ಕೋರಿಕೆಯ ಮೇರೆಗೆ ವೈದ್ಯಕೀಯ ಪದವಿ, ಸ್ನಾತಕೋತ್ತರ ವೃತ್ತಿಪರ, ತಾಂತ್ರಿಕ ಮತ್ತು ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಮಾತ್ರ ಅರ್ಜಿ ಸಲ್ಲಿಸಲು ದಿನಾಂಕವನ್ನು 15-12-2025 ರವರೆಗೆ ವಿಸ್ತರಿಸಲಾಗಿದೆ.
ಆದ್ದರಿಂದ ಸದರಿ ಯೋಜನೆಗಳ ಸದುಪಯೋಗ ಪಡೆಯಲು ಅರ್ಹ ಅಭ್ಯರ್ಥಿಗಳು ಕೂಡಲೇ ಕೊನೆಯ ದಿನಾಂಕಗಳ ಒಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಕಛೇರಿ/ ಜಿಲ್ಲಾ ಮಾಹಿತಿ ಕೇಂದ್ರ, ಮೌಲಾನ ಆಜಾದ್ ಭವನ, ಆಕಾಶವಾಣಿ ಹಿಂಭಾಗ, ಸಾಲಗಾಮೆ ಮುಖ್ಯ ರಸ್ತೆ, ಹಾಸನ-573202 08172-268373 ಇವರನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa