ನಾನಾ ಯೋಜನೆಗಳಿಗೆ ಅರ್ಜಿ ಆಹ್ವಾನ
ಚಿತ್ರದುರ್ಗ, 07 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಅನುಷ್ಠಾನಗೊಳಿಸುತ್ತಿರುವ ಚೇತನ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ದೇವದಾಸಿ ಪುನರ್ವಸತಿ ಯೋಜನೆ, ಉದ್ಯೋಗಿನಿ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್‍ನಲ್ಲಿ ಆ
ನಾನಾ ಯೋಜನೆಗಳಿಗೆ ಅರ್ಜಿ ಆಹ್ವಾನ


ಚಿತ್ರದುರ್ಗ, 07 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಅನುಷ್ಠಾನಗೊಳಿಸುತ್ತಿರುವ ಚೇತನ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ದೇವದಾಸಿ ಪುನರ್ವಸತಿ ಯೋಜನೆ, ಉದ್ಯೋಗಿನಿ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿ.15 ಅರ್ಜಿ ಸಲ್ಲಿಸಲು ಕೊನೆಯ ದಿನ.

ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು.

ಧನಶ್ರೀ ಯೋಜನೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯ ಅರ್ಜಿದಾರರು ಅರ್ಜಿಯನ್ನು ಆನ್‍ಲೈನ್ ಮತ್ತು ಆಫ್‍ಲೈನ್‍ಗಳಲ್ಲಿ ಸಲ್ಲಿಸಬಹುದು.

ಈ ಎರಡು ಯೋಜನೆಗಳಿಗೆ ಅರ್ಜಿಯನ್ನು ಆಫ್‍ಲೈನ್‍ನಲ್ಲಿ ಸಲ್ಲಿಸುವವರು ನಿಗಧಿಪಡಸಿದ ಅವಧಿಯೊಳಗೆ ಅಗತ್ಯ ದಾಖಲೆಗಳೊಂದಿಗೆ ತಮ್ಮ ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸುವುದು.

ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ ಸೀಡಿಂಗ್ ಮಾಡಿಸಿರಬೇಕು. ಈ ಹಿಂದಿನ ಸಾಲುಗಳಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ ಜಿಲ್ಲೆ ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಕಚೇರಿ, ಚಿತ್ರದುರ್ಗ, ದೂರವಾಣಿ ಸಂಖ್ಯೆ 7019967954 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande