ಕರ್ನಾಟಕ ರಾಜ್ಯ ಆಹಾರ ಆಯೋಗದ ಜಿಲ್ಲಾ ಪ್ರವಾಸ
ಶಿವಮೊಗ್ಗ, 07 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಆಹಾರ ಆಯೋಗವು ಡಿ. 8 ರಿಂದ 11 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ನ್ಯಾಯಬೆಲೆ ಅಂಗಡಿ, ಆಹಾರ ಧ್ಯಾನ್ಯ ಸಗಟು ಮಳಿಗೆ, ಅಂಗನವಾಡಿ ಕೇಂದ್ರ, ಎಂ.ಎಸ್.ಪಿ.ಟಿ.ಸಿ., ಮಧ
ಕರ್ನಾಟಕ ರಾಜ್ಯ ಆಹಾರ ಆಯೋಗದ ಜಿಲ್ಲಾ ಪ್ರವಾಸ


ಶಿವಮೊಗ್ಗ, 07 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಆಹಾರ ಆಯೋಗವು ಡಿ. 8 ರಿಂದ 11 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ನ್ಯಾಯಬೆಲೆ ಅಂಗಡಿ, ಆಹಾರ ಧ್ಯಾನ್ಯ ಸಗಟು ಮಳಿಗೆ, ಅಂಗನವಾಡಿ ಕೇಂದ್ರ, ಎಂ.ಎಸ್.ಪಿ.ಟಿ.ಸಿ., ಮಧ್ಯಾಹ್ನ ಉಪಹಾರ ಯೋಜನೆ, ಜಿಲ್ಲಾ ಆಸ್ಪತ್ರೆಯಲ್ಲಿರುವ ಎನ್.ಆರ್.ಸಿ. ಘಟಕ, ಹಾಗೂ ಇಲಾಖೆಗಳ ಪರೀಶೀಲನೆ, ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಯೊಂದಿಗೆ ಸಭೆಯನ್ನು ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಲಿದ್ದಾರೆ.

ಆಯೋಗದ ಪ್ರವಾಸದಲ್ಲಿ ಅಧ್ಯಕ್ಷರಾದ ಡಾ. ಹೆಚ್. ಕೃಷ್ಣ, ಸದಸ್ಯರಾದ ಲಿಂಗರಾಜ ಕೋಟೆ, ಸುಮಂತ್ ರಾವ್, ಮಾರುತಿ ಎಂ ದೊಡ್ಡಲಿಂಗಣ್ಣವರ, ಶ್ರೀಮತಿ ಎ. ರೋಹಿಣಿ ಪ್ರಿಯ ಮತ್ತು ಶ್ರೀಮತಿ ಕೆ.ಎಸ್.ವಿಜಯಲಕ್ಷ್ಮೀ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಗದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande