ವೃಕ್ಷಥಾನ್ ಪಾರಂಪರಿಕ ಓಟ-2025ಕ್ಕೆ ಸಚಿವ ಖಂಡ್ರೆ, ಪಾಟೀಲ ಚಾಲನೆ
ವಿಜಯಪುರ, 07 ಡಿಸೆಂಬರ್ (ಹಿ.ಸ.) : ಆ್ಯಂಕರ್ :ವಿಜಯಪುರ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಅರಣ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವೃಕ್ಷ ಅಭಿಯಾನ ಪ್ರತಿμÁ್ಠನ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಪರಿಸರ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆಗೆ ಆಯೋಜಿಸಿದ ವೃಕ್ಷಥಾನ್ ಪಾರಂಪರಿಕ ಓಟ-2025 ಭಾನುವಾರ ಯಶಸ
ರನ್


ವಿಜಯಪುರ, 07 ಡಿಸೆಂಬರ್ (ಹಿ.ಸ.) :

ಆ್ಯಂಕರ್ :ವಿಜಯಪುರ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಅರಣ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವೃಕ್ಷ ಅಭಿಯಾನ ಪ್ರತಿμÁ್ಠನ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಪರಿಸರ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆಗೆ ಆಯೋಜಿಸಿದ ವೃಕ್ಷಥಾನ್ ಪಾರಂಪರಿಕ ಓಟ-2025 ಭಾನುವಾರ ಯಶಸ್ವಿಯಾಗಿ ಜರುಗಿತು.

ಇಂದು ನಡೆದ 21 ಕಿ.ಮೀ, 10 ಕಿ.ಮೀ ಹಾಗೂ 5 ಕಿ.ಮೀ ವಿಭಾಗಗಳಲ್ಲಿ ನಡೆದ ವೃಕ್ಷಥಾನ್ ಪಾರಂಪರಿಕ ಓಟ ಕಾರ್ಯಕ್ರಮದಲ್ಲಿ ಹಲವು ಖ್ಯಾತನಾಮರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಮ್ಯಾರಥಾನ್‍ಗೆ ಚಾಲನೆ ನೀಡಿದ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು 5 ಕಿ.ಮೀ. ಓಡಿ ಯುವಕರನ್ನು ಹುರಿದುಂಬಿಸಿದರು.

ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಹಾಗೂ ಅವುಗಳ ಮಹತ್ವ ಸಾರುವ ನಿಟ್ಟಿನಲ್ಲಿ ಕೋಟಿ ವೃಕ್ಷ ಅಭಿಯಾನದ ಅಂಗವಾಗಿ ರವಿವಾರ ಹಮ್ಮಿಕೊಂಡ ವೃಕ್ಷಥಾನ ಪಾರಂಪರಿಕ ಓಟದ ಬಹುಮಾನ ವಿತರಣೆ ಸಮಾರಂಭದಲ್ಲಿ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಮಾತನಾಡಿ, ಭವಿಷ್ಯದಲ್ಲಿ ಪರಿಸರ ಹಾಗೂ ಭವ್ಯ ಸ್ಮಾರಕಗಳ ಸಂರಕ್ಷಣೆಯ ಆಶಯಗಳನ್ನೊಳಗೊಂಡ ಈ ಕಾರ್ಯಕ್ರಮದ ಉದ್ಧೇಶವಾಗಿದೆ. ನಮ್ಮ ಮುಂದಿನ ಪೀಳಿಗೆಗೆ ಸ್ವಚ್ಚ ಸುಂದರ ಪರಿಸರ ಒದಗಿಸಿಕೊಡುವುದು ಹೊಣೆ ನಮ್ಮದಾಗಿದೆ. ಈ ಮೂಲಕ ಪರಿಸರ ಹಾಗೂ ಪಾರಂಪರಿಕ ಸ್ಮಾರಕಗಳ ರಕ್ಷಣೆಯ ಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದೆ. ಪರಿಸರದ ಮಹತ್ವ ತಿಳಿಸಿಕೊಡುವುದು ಇಂದಿನ ಅಗತ್ಯವೂ ಆಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಪರಿಸರ ಕಾಳಜಿ ಹೊಂದಬೇಕು. ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಮಾರಕಗಳ ರಕ್ಷಣೆ, ಗಿಡ-ಮರಗಳನ್ನು ಬೆಳೆಸಿ ಸ್ವಚ್ಛ ಸುಂದರ ಪರಿಸರ ನಿರ್ಮಾಣ ಮಾಡುವ ಪ್ರತಿಯೊಬ್ಬರು ಕೈ ಜೋಡಿಸುವಂತೆ ಅವರು ಕರೆ ನೀಡಿದರು.

ಜಿಲ್ಲೆಯಲ್ಲಿ ಹಲವಾರು ಐತಿಹಾಸಿಕ ಸ್ಮಾರಕಗಳಿವೆÉ. ಐತಿಹಾಸಿಕ ಸ್ಮಾರಕಗಳನ್ನು ಸಂರಕ್ಷಣೆ ಮಾಡಿ, ಅಭಿವೃದ್ಧಿಪಡಿಸಿ ಸ್ಮಾರಕಗಳ ಬಗ್ಗೆ ವ್ಯಾಪಕ ತಿಳುವಳಿಕೆ ಮೂಡಿಸಬೇಕು. ವೃಕ್ಷಥಾನ ಪಾರಂಪರಿಕ ಓಟ ಇತಿಹಾಸ ನಿರ್ಮಾಣ ಮಾಡಿದೆ. ಜಲಸಂಪನ್ಮೂಲ ಸಚಿವನಾಗಿದ್ದ ಸಂದರ್ಭದಲ್ಲಿ 2016-17ರ ಅವಧಿಯಲ್ಲಿ ಕೋಟಿ ವೃಕ್ಷ ಅಭಿಯಾನ ಆರಂಭಿಸುವ ಮೂಲಕ ಜಿಲ್ಲೆಯ ಅರಣ್ಯೀಕರಣವನ್ನು ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ. ಕೋಟಿ ವೃಕ್ಷ ಅಭಿಯಾನ ಪ್ರಾರಂಭ ಮಾಡಿ, ಜಿಲ್ಲೆಯಲ್ಲಿ 1.5 ಕೋಟಿ ಗಿಡಗಳನ್ನು ನೆಟ್ಟು ಪೋಷಿಸಲಾಗಿದೆ ಎಂದು ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ವೃಕ್ಷ ಅಭಿಯಾನ ಪ್ರತಿಷ್ಠಾನ ಸೇರಿದಂತೆ ಸಾರ್ವಜನಿಕರು ಸಂಘ-ಸಂಸ್ಥೆಗಳು, ಪಕ್ಷಾತೀತವಾಗಿ ಯುವಕರು ಕೈ ಜೋಡಿಸಿರುವುದರಿಂದ ಜನರಲ್ಲಿ ಜಾಗೃತಿ ಮೂಡಿಸಿ, ಜಿಲ್ಲೆಯ ಅರಣ್ಯ ಪ್ರದೇಶ ವಿಸ್ತೀರ್ಣ ಶೇ.0.17 ರಿಂದ ಶೇ.2 ಕ್ಕೆ ತಲುಪಲು ಸಾಧ್ಯವಾಗಿದೆ. 2035ರ ಹೊತ್ತಿಗೆ ಮುಂದಿನ ಹತ್ತು ವರ್ಷಗಳಲ್ಲಿ ಜಿಲ್ಲೆಯಲ್ಲಿ 5 ಕೋಟಿ ಗಿಡ ನೆಡುವ ಗುರಿ ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ಅರಣ್ಯೀಕರಣದ ಮಹತ್ವದ ಬಗ್ಗೆ ಜಾಗೃತಿ ಅಗತ್ಯವಾಗಿದೆ. ಪರಿಸರ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಸಿಗಳ ನೆಡುವ ಹಾಗೂ ಅರಣ್ಯೀಕರಣದ ಮೂಲಕ ಪರಿಸರ ಉಳಿಸಿ ಬೆಳೆಸಬೇಕು. ಸ್ಮಾರಕಗಳ ರಕ್ಷಣೆ ವೃಕ್ಷಥಾನ ಆಯೋಜನೆಯ ಸಂದೇಶ ಸಾಕಾರಗೊಳ್ಳಲಿ, ಓಟದಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯವಾಗಿದೆ ಎಂದು ಅವರು ಹೇಳಿದರು.

ಐತಿಹಾಸಿಕ ಸ್ಮಾರಕಗಳ ರಕ್ಷಣೆಯೊಂದಿಗೆ ಪರಿಸರ ಜಾಗೃತಿ ಮೂಡಿಸುವ ಅಂಗವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪರಿಸರ ರಕ್ಷಣೆ, ಪರಿಸರ ಪ್ರೇಮಿ ಹಾಗೂ ಪರಿಸರ ಕುರಿತು ಅಪಾರ ಕಾಳಜಿ ಹೊಂದಿದ್ದ ಜ್ಞಾನಯೋಗಾಶ್ರಮದ ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಶ್ರೀಗಳ ಆಶಯದಂತೆ ಸ್ವಚ್ಛ ಸುಂದರ ಹಾಗೂ ಆರೋಗ್ಯಕರ ಜಿಲ್ಲೆಯಾಗಬೇಕೆಂಬ ಆಶಯದೊಂದಿಗೆ ಈ ವೃಕ್ಷಥಾನ ಅತ್ಯಂತ ಮೆರಗಿನಿಂದ ಅಭಿಯಾನ ಹಮ್ಮಿಕೊಂಡು ಅವರ ಆಶಯದಂತೆ ಮುನ್ನಡೆಯಲಾಗುತ್ತಿದ್ದು, ಎಲ್ಲರ ಸಹಕಾರದಿಂದ ಯಶಸ್ವಿಯಾಗಿದೆ. ಈ ಕಾರ್ಯಕ್ಕೆ ಅಭೂತಪೂರ್ವ ಸಹಕಾರ ಹಾಗೂ ಪ್ರೋತ್ಸಾಹ ದೊರೆತು ಇತಿಹಾಸ ನಿರ್ಮಾಣವಾಗಿದೆ ಎಂದು ಅವರು ಹೇಳಿದರು.

ಜಿಲ್ಲೆಯ ಹಸರೀಕರಣ ಹಾಗೂ ಐತಿಹಾಸಿಕ ಸ್ಮಾರಕಗಳ ಮಹತ್ವ ಸಾರುವ ಈ ವಿಶೇಷವಾದ ಕಾರ್ಯಕ್ರಮಕ್ಕೆ ಈ ಅಭೂತಪೂರ್ವ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಹಾಗೂ ಮ್ಯಾರಾಥಾನ್‍ನಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಅಭಿನಂದನೆ ಸಲ್ಲಿಸಿದ ಅವರು, ಪುರುಷರಿಗಿಂತ ಮಹಿಳೆಯರ ಭಾಗವಹಿಸುವಿಕೆ ಪ್ರಮಾಣ ಹೆಚ್ಚಿಗಿರುವುದರಿಂದ ಇದೊಂದು ಅಭೂತಪೂರ್ವ ಯಶಸ್ವಿಗೆ ಕಾರಣವಾಗಿದೆ. ಎಲ್ಲರ ಸಹಭಾಗಿತ್ವದಲ್ಲಿ ಸುಂದರ ಪರಿಸರವನ್ನು ಕಾಪಾಡಿಕೊಂಡು ನಮ್ಮ ಮುಂದಿನ ಪೀಳಿಗೆಗೆ ನೀಡುವ ಬಹು ದೊಡ್ಡ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಇಂಡಿ ತಾಲೂಕಿನ ಹಳಗುಣಕಿ ಗ್ರಾಮದ ಪೊಲೀಸ್ ಇಲಾಖೆಯ ಭೀಮಾಶಂಕರ ಮಾಡಗ್ಯಾಳ,ನ್ಯೂ ಮುಂಬೈನ ಅಥ್ಲಿಟ್ ಶ್ರೇಯಸ್ ಯಶವಂತ ರಾವ್,ಕೆಂಗಲಗುತ್ತಿ ಶಾಲಾ ಮುಖ್ಯೋಪಾಧ್ಯಾಯ ಹಣಮಂತ ಕಾತರಕಿ ಹಾಗೂ ಭಾರತೀಯ ಪುರಾತತ್ವ ಇಲಾಖೆಯ ನಿವೃತ್ತ ಸಿಬ್ಬಂದಿ ಮೌಲಾಸಾಬ ಮೈನುದ್ದೀನಸಾಬ ಅವರನ್ನು ಸನ್ಮಾನಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande