ಗೋವಾ ದುರಂತಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ
ನವದೆಹಲಿ, 07 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಉತ್ತರ ಗೋವಾದ ಅರ್ಪೋರಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 23 ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ತಮ್ಮ ಸಂದೇಶದ
Condolences


ನವದೆಹಲಿ, 07 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಉತ್ತರ ಗೋವಾದ ಅರ್ಪೋರಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 23 ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ತಮ್ಮ ಸಂದೇಶದಲ್ಲಿ, ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ., ಗಾಯಾಳುಗಳಿಗೆ 50 ಸಾವಿರ ರೂ.ಗಳ ಆರ್ಥಿಕ ನೆರವು ಘೋಷಿಸಿದ್ದಾರೆ.

“ಈ ದುರಂತ ತೀವ್ರ ದುಃಖಕರ. ಗೋವಾ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದೇನೆ. ರಾಜ್ಯ ಸರ್ಕಾರ ಸಂತ್ರಸ್ತರಿಗೆ ಸಾಧ್ಯವಾದ ಎಲ್ಲಾ ನೆರವನ್ನು ಒದಗಿಸುತ್ತಿದೆ” ಎಂದು ಪ್ರಧಾನ ಮಂತ್ರಿ ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಕ್ಸ್‌ನಲ್ಲಿ, “ಈ ಭೀಕರ ಬೆಂಕಿ ಅವಘಡ ಅನೇಕ ಜೀವಗಳನ್ನು ಬಲಿ ತೆಗೆದುಕೊಂಡಿದೆ. ಮೃತರ ಕುಟುಂಬಗಳಿಗೆ ಆಳವಾದ ಸಂತಾಪಗಳು ಈ ದುಃಖದ ಹೊತ್ತಿನಲ್ಲಿ ಅವರಿಗೆ ಧೈರ್ಯ ದೊರಕಲಿ ಎಂದು ಪ್ರಾರ್ಥಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande