
ಧಾರವಾಡ, 07 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮತ್ತು ಫಲ-ಪುಷ್ಪ ಪ್ರದರ್ಶನ ಸಮಿತಿ, ಜಿಲ್ಲಾ ಹಾಪ್ ಕಾಮ್ಸ್, ಮೀನುಗಾರಿಕೆ ಇಲಾಖೆ, ಎನ್‍ಆರ್‍ಎಲ್‍ಎಮ್ (ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ) ಅವರ ಸಹಯೋಗದೊಂದಿಗೆ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಫಲ-ಪುಷ್ಪ ಪ್ರದರ್ಶನವನ್ನು ಹಾಗೂ ಸಿರಿಧಾನ್ಯ ಹಬ್ಬವನ್ನು ಡಿಸೆಂಬರ್ 13, 2025 ರಿಂದ ಡಿಸೆಂಬರ್ 15, 2025 ರವರೆಗೆ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆ ಆವರಣದಲ್ಲಿ ಆಯೋಜಿಸಲಾಗಿದೆ.
ಸದರಿ ಫಲ-ಪುಷ್ಪ ಪ್ರದರ್ಶನ ಹಾಗೂ ಸಿರಿಧಾನ್ಯ ಹಬ್ಬದಲ್ಲಿ ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ಸಂಘ ಸಂಸ್ಥೆಗಳು, ರೈತರು ಮತ್ತು ಸಾರ್ವಜನಿಕರಿಗೆ ತೋಟಗಾರಿಕೆ ಬೆಳೆಗಳು, ಹೂಗಳು ಮತ್ತು ಅಲಂಕಾರಿಕ ಗಿಡಗಳ ಪ್ರದರ್ಶನದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0836-2957801 ಗೆ ಅಥವಾ ಧಾರವಾಡ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯ ವಲಯ) ಅಥವಾ ಹುಬ್ಬಳ್ಳಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ಜಿಲ್ಲಾ ಪಂಚಾಯತ) ನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಜಂಟಿ ನಿರ್ದೇಶಕ ಕಾಶೀನಾಥ ಭದ್ರನ್ನವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa