
ಧಾರವಾಡ, 07 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿನಲ್ಲಿ ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಶನ್‍ನಿಂದ ಮಾನ್ಯತೆ ಪಡೆದಿರುವ ಧಾರವಾಡ ಜಿಲ್ಲೆಯಲ್ಲಿನ ಸರ್ಕಾರಿ, ಅರೇಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ರೂ.25,000 ಗಳ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಹಾಗೂ ಅರ್ಹ ಅಲ್ಪಸಂಖ್ಯಾತರ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್,ಬೌದ್ಧ, ಪರ್ಶಿಯನ್) ವಿದ್ಯಾರ್ಥಿಗಳು https://sevasindu.karanataka.gov.in ಸೇವಾಸಿಂಧು ಪೋರ್ಟಲ್ ಮೂಲಕ ಡಿಸೆಂಬರ್ 31, 2025 ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2971590 ಹಾಗೂ ಇಲಾಖಾ ಸಹಾಯವಾಣಿ:8277799990 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa