
ವಿಜಯಪುರ, 08 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸನಬಾಗೇವಾಡಿ ತಾಲ್ಲೂಕಿನ ಕಾಮನಕೇರಿ ಮತ್ತು ದಿಂಡವಾರ ಮಧ್ಯದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಬಸವನಬಾಗೇವಾಡಿ ತಾಲ್ಲೂಕಿನ ಬೂದಿಹಾಳ ಗ್ರಾಮದ ಗುರುಲಿಂಗಯ್ಯ ಗಣಿಮಠ 48 ಮೃತಪಟ್ಟಿರುವ ದುರ್ದೈವಿ. ಇನ್ನು ಅಪರಿಚಿತ ವಾಹನ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಬಸವನಬಾಗೇವಾಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande