ರಾಜ್ಯ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷರಾಗಿ ವಿ.ಕೃಷ್ಣಾರೆಡ್ಡಿ ಅವಿರೋಧ ಆಯ್ಕೆ
ರಾಜ್ಯ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷರಾಗಿ ವಿ.ಕೃಷ್ಣಾರೆಡ್ಡಿ ಅವಿರೋಧ ಆಯ್ಕೆ
ಗುತ್ತಿಗೆದಾರ ಸಂಘದ ಅಧ್ಯಕ್ಷ ಕೃಷ್ಣಾರೆಡ್ಡಿ


ಕೋಲಾರ, 0೮ ಡಿಸೆಂಬರ್ (ಹಿ.ಸ) :

ಆ್ಯಂಕರ್ : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷರಾಗಿ ಕೋಲಾರದ ವಿ.ಕೃಷ್ಣಾರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಗುತ್ತಿಗೆದಾರರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ, ೨೦೨೫-೨೬ ರಿಂದ ೨೦೨೯-೩೦ ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಗೌರವಾಧ್ಯಕ್ಷರಾಗಿ ವಿ.ಕೃಷ್ಣಾರೆಡ್ಡಿ ಆಯ್ಕೆಯಾಗಿದ್ದಾರೆ.

ಪ್ರಸ್ತುತ ವಿ.ಕೃಷ್ಣಾರೆಡ್ಡಿ ಅವರು ಕೋಲಾರ ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ರಾಜ್ಯ ಸಂಘದ ಅಧ್ಯಕ್ಷರಾಗಿ ಹಾಗೂ ಹಲವು ಹುದ್ದೆಗಳನ್ನು ನಿರ್ವಹಿಸಿದ್ದ ಅನುಭವ ವಿ.ಕೃಷ್ಣಾರೆಡ್ಡಿ ಅವರಿಗೆ ಇದೆ. ವಿ.ಕೃಷ್ಣಾರೆಡ್ಡಿ ಅವರ ಅನುಭವದ ಹಿನ್ನಲೆಯಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ಸದಸ್ಯರೆಲ್ಲರೂ ಸೇರಿ ಸಂಘದ ಗೌರವಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

ಚಿತ್ರ : ಗುತ್ತಿಗೆದಾರ ಸಂಘದ ಅಧ್ಯಕ್ಷ ಕೃಷ್ಣಾರೆಡ್ಡಿ

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande