ಡೇಟಾ ಎಂಟ್ರಿ ಆಪರೇಟರ್‌ಗಳ ನೇಮಕಾತಿಯಲ್ಲಿ ಅಕ್ರಮದ ಆರೋಪ
ಡೇಟಾ ಎಂಟ್ರಿ ಆಪರೇಟರ್‌ಗಳ ನೇಮಕಾತಿಯಲ್ಲಿ ಅಕ್ರಮದ ಆರೋಪ
ಕೋಲಾರ ಎಸ್.ಎನ್.ಆರ್. ಆಸ್ಪತ್ರೆಯಲ್ಲಿ ಡೇಟಾ ಎಂಟ್ರಿ ಆಪರೇಟರ್‌ಗಳ ಆಯ್ಕೆ ರದ್ದುಪಡಿಸುವಂತೆ ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.


ಕೋಲಾರ, ೦೮ ಡಿಸೆಂಬರ್ (ಹಿ.ಸ) :

ಆ್ಯಂಕರ್ : ಕಾನೂನು ಬಾಹಿರವಾಗಿ ಮಾಡಿರುವ ಡೆಟಾ ಎಂಟ್ರಿ ಆಪರೇಟರ್‌ಗಳ ಆಯ್ಕೆಯನ್ನು ರದ್ದುಗೊಳಿಸಿ, ಹೊಸದಾಗಿ ಮರು ಆಯ್ಕೆಮಾಡಿ ಕರ್ತವ್ಯ ಲೋಪವೆಸಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಪ್ರವೀಣ್ ಪಿ.ಬಾಗೇವಾಡಿ ಅವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದ ಯೋಜನೆಯಡಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಶ್ರೀ ನರಸಿಂಹರಾಜ (ಎಸ್.ಎನ್.ಆರ್) ಜಿಲ್ಲಾ ಆಸ್ಪತ್ರೆ ಇಲ್ಲಿ ನೇಮಕಗೊಂಡಿರುವ ಡಾಟಾ ಎಂಟ್ರಿ ಆಪರೇಟರ್ ಡಿ.ಇ.ಒ. ಹುದ್ದೆಗಳು ಕಾರ್ಯಕ್ರಮದ ಮಾರ್ಗಸೂಚಿ ಉಲ್ಲಂಘನೆಯಾಗಿದೆ. ಪಾರದರ್ಶಕತೆ ಆಯ್ಕೆ ಪ್ರಕ್ರಿಯೆ ಮಾಡದೆ ಲೋಪ ದೋಷಗಳಿಂದ ಕೂಡಿದ್ದು ಸದರಿ ಡಿ.ಇ.ಒ.ಗಳ ಅನುಮೋದನೆಯನ್ನು ರದ್ದುಗೊಳಿಸಿ ಇದರಲ್ಲಿ ನಿಯಮ ಉಲ್ಲಂಘನೆ ಮಾಡಿದ ಜಿಲ್ಲಾ ಶಸ್ತ್ರಚಿಕಿತ್ಸಕ ಜಗದೀಶ್ ರವರು ಮತ್ತು ಇದರ ಬಗ್ಗೆ ದಾಖಲೆಗಳ ಸಮೇತ ದೂರು ನೀಡಿದರು ಸಹ ಕ್ರಮವಹಿಸದೆ ಸದರಿ ಡಿ.ಇ.ಒ.ಗಳ ಪಟ್ಟಿಯನ್ನು ಅನುಮೋದನೆ ಆಯುಕ್ತರಿಗೆ ಸಲ್ಲಿಸಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಶ್ರೀನಿವಾಸ್ ರವರನ್ನು ಕರ್ತವ್ಯ ಲೋಪದಡಿ ಅಮಾನತ್ತುಗೊಳಿಸಿ ಎಂಟು ಜನ ಡಿ.ಇ.ಒ. ಗಳ, ಆಯ್ಕೆಯನ್ನು ರದ್ದುಮಾಡಿ ಅನ್‌ಲೈನ್ ರ‍್ಪಾಮೆನ್ಸ್ ಮತ್ತು ಲಿಖಿತ ಪರೀಕ್ಷೆ ನಡೆಸಿ ಜೇಷ್ಠತೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಹೊಸದಾಗಿ ಆಯ್ಕೆ ಮಾಡಿಕೊಳ್ಳಲು ಕ್ರಮ ಜರುಗಿಸುವವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್, ತಾಲೂಕು ಸಂಚಾಲಕ ದೇಸಿಹಳ್ಳಿ ಶ್ರೀನಿವಾಸ್, ಮೆಹಬೂಬ್ ಪಾಷ, ಶಿವಕುಮಾರ್, ಮೇಸ್ತಿç ಸೀನಪ, ಅಪ್ಪು, ಇನ್ನಿತರರು ಇದ್ದರು.

ಚಿತ್ರ : ಕೋಲಾರ ಎಸ್.ಎನ್.ಆರ್. ಆಸ್ಪತ್ರೆಯಲ್ಲಿ ಡೇಟಾ ಎಂಟ್ರಿ ಆಪರೇಟರ್‌ಗಳ ಆಯ್ಕೆ ರದ್ದುಪಡಿಸುವಂತೆ ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande