ಬಳ್ಳಾರಿ : ಡಿ.13 ರಂದು ವಿಭಾಗೀಯ ಕಚೇರಿ ಉದ್ಘಾಟನೆ
ನೀಡುವ
ಬಳ್ಳಾರಿ: ಡಿ.13 ರಂದು ವಿಭಾಗೀಯ ಕಚೇರಿ ಉದ್ಘಾಟನೆ


ಬಳ್ಳಾರಿ: ಡಿ.13 ರಂದು ವಿಭಾಗೀಯ ಕಚೇರಿ ಉದ್ಘಾಟನೆ


ಬಳ್ಳಾರಿ, 08 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ನೂತನ ಕಾನೂನು ಅಧಿಕಾರಿ (ಹಿರಿಯ) ಯವರ ಬಳ್ಳಾರಿ ವಿಭಾಗೀಯ ಕಚೇರಿಯ ಉದ್ಘಾಟನಾ ಸಮಾರಂಭ ಡಿ.13 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹಳೆಯ ನ್ಯಾಯಾಲಯ ಆವರಣದ ಅಭಿಯೋಜಕ ಭವನದಲ್ಲಿ ಏರ್ಪಡಿಸಲಾಗಿದೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ನೂತನ ಕಚೇರಿಯ ಉದ್ಘಾಟನೆ ನೆರವೇರಿಸುವರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಹಾಗೂ ಪ್ರವಾಸೋದ್ಯಮ ಸಚಿವ ಡಾ.ಎಚ್.ಕೆ ಪಾಟೀಲ್ ಅವರು ‘ನೊಂದವರಿಗೆ ನ್ಯಾಯ’ ಜಾಗೃತಿ ಅಭಿಯಾನ ಉದ್ಘಾಟಿಸುವರು.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜಡ್ ಜಮೀರ್ ಅಹ್ಮದ್ ಖಾನ್ ಅವರು ‘ನ್ಯಾಯ ಜ್ಯೋತಿ’ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಮಾಜಿ ಸಚಿವರು ಹಾಗೂ ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ವಿಭಾಗೀಯ ಕಚೇರಿಯ ವೆಬ್ ಸೈಟ್ ಗೆ ಚಾಲನೆ ನೀಡುವರು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಬಳ್ಳಾರಿ ವಲಯ ಪೊಲೀಸ್ ಉಪ ಮಹಾನಿರೀಕ್ಷಕರಾದ ವರ್ತಿಕಾ ಕಟಿಯಾರ್, ಬಳ್ಳಾರಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್, ಕೊಪ್ಪಳ ಜಿಲ್ಲಾಧಿಕಾರಿ ಡಾ.ಬಿ.ಸುರೇಶ್ ಹಿಟ್ನಾಳ, ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ., ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ ಅರಸಿದ್ದಿ, ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ., ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟ ಮಾದಯ್ಯ, ಬಳ್ಳಾರಿ ವಿಭಾಗ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಹೇಮರಾಜ ಕೆ., ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಬೆಂಗಳೂರಿನ ನಿರ್ದೇಶಕರಾದ ಅಂಜಲಿದೇವಿ, ಬಳ್ಳಾರಿ ವಿಭಾಗೀಯ ಕಚೇರಿಯ ಕಾನೂನು ಅಧಿಕಾರಿ(ಹಿರಿಯ) ಬಿ.ಎಸ್.ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿರುವರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande