
ರಾಯಚೂರು, 08 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ 2025-26ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಾನೂನು ಪದವೀಧರರನ್ನು ಆಡಳಿತ ನ್ಯಾಯಧೀಕರಣ ತರಬೇತಿಗೆ ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು, ಇಲಾಖೆಯ ವೆಬ್‌ಸ್ಶೆಟ್ ವಿಳಾಸ: www.twd.karnataka.gov.inರಡಿಯ ಸ್ಟಿಪೆಚಿಡ್ ಟು ಲಾ ಗ್ರಾಜ್ಯುಯೇಟ್ಸ್ ಡಿಸೆಂಬರ್ 19ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಯನ್ನು ಎಲ್ಲಾ ದಾಖಲಾತಿಗಳೊಂದಿಗೆ ಜಿಲ್ಲಾ ಅಥವಾ ತಾಲೂಕಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯಕ್ಕೆ ಕಚೇರಿ ವೇಳೆಯಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ರಾಯಚೂರು ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕ ಮಾಡಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್